ಸೋಮವಾರಪೇಟೆ, ಜು. ೧೨: ಸಮೀಪದ ಜ್ಞಾನವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮAಡಲದ ಮಂತ್ರಿಗಳು ಹಾಗೂ ಪದಾಧಿಕಾರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು. ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಸ್. ವೆಂಕಟೇಶ್ ಅವರು ನೂತನ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಸ್ಥಳೀಯ ಆಯುಷ್ ಆಸ್ಪತ್ರೆಯ ವೈದ್ಯಾಧಿಕಾರಿ ಸೌಪಾರ್ಣಿಕ ಆರೋಗ್ಯ ಸಂರಕ್ಷಣೆಯಲ್ಲಿ ಗಿಡ ಮೂಲಿಕೆಗಳ ಪಾತ್ರ ಹಾಗೂ ಹಲಸಿನ ಹಣ್ಣಿನಲ್ಲಿರುವ ಔಷಧೀಯ ಗುಣಗಳ ಬಗ್ಗೆ ಮಾಹಿತಿ ನೀಡಿದರು. ಯೋಗ ನಿರ್ದೇಶಕ ಕೌಶಿಕ್ ಯೋಗ ಮುದ್ರೆಗಳು ಮತ್ತು ಅವುಗಳ ಉಪಯೋಗದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಎಂ.ಜೆ. ಅನ್ನಮ್ಮ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.