ವೀರಾಜಪೇಟೆ: ವೀರಾಜಪೇಟೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿಗಳು ಆಯೋಜಿಸಿದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಶಾಸಕ ಪೊನ್ನಣ್ಣ ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರ ಲಕ್ಷ÷್ಮಣ್, ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಕಾಳಮಂಡ ನಯನ, ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೇಟಿರ ಬೋಪಣ್ಣ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಸದಸ್ಯರಾದ ರಾಜೇಶ್ ಪದ್ಮನಾಭ, ರಾಫಿ, ಮತೀನ್, ಜಿಲ್ಲಾ ಅಲ್ಪಸಂಖ್ಯಾತ ಘಟದ ಅಧ್ಯಕ್ಷ ಹನೀಫ್, ತಾಲೂಕು ಘಟದ ಅಧ್ಯಕ್ಷ ರಫೀಕ್, ಪಕ್ಷದ ಮುಖಂಡರು, ಜೋಕಿಮ್, ಶಬರಿಶ್ ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.