ಗೋಣಿಕೊಪ್ಪಲು, ಜು. ೧೩: ಎಸ್ಐಆರ್ ಪ್ರಕ್ರಿಯೆಗೆ ರಾಜ್ಯ ಸರ್ಕಾರದ ವಾಸ ಧೃಡೀಕರಣ ಪತ್ರ ನೀಡುವ ನೀತಿಯನ್ನು ಆಕ್ಷೇಪಿಸಿ ಕೊಡಗು ಜಿಲ್ಲಾ ಬಿಜೆಪಿ ನೋಂದಣಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದೆ.
ಕೊಡಗಿನಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಕೆಲವರು ಬಿಎಲ್ಓಗಳಿಗೆ ಒತ್ತಡ ಹಾಕುವುದರಿಂದ ಪ್ರಕ್ರಿಯೆಗೆ ಅಡ್ಡಿ ಉಂಟಾಗಲಿದೆ. ವಾಸ ಧೃಡೀಕರಣ ನೀಡುವ ರಾಜ್ಯ ಸರ್ಕಾರದ ತೀರ್ಮಾನ ಕಾನೂನು ಬಾಹಿರ ಎಂದು ಆಕ್ಷೇಪಿಸಿ ಮತದಾನ ನೋಂದಣಾಧಿಕಾರಿ ಆರ್. ಮಂಜುನಾಥ್ ಅವರಿಗೆ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಆಕ್ಷೇಪಣೆ ಸಲ್ಲಿಸಲಾಯಿತು. ಭಾರತಿಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ಕಿಲನ್ ಗಣಪತಿಯವರ ನಿಯೋಗ ಅಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ರಾಜ್ಯ ರೈತ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ಯಮುನಾ ಚಂಗಪ್ಪ, ಮತ್ರಂಡ ಕಬೀರ್ ದಾಸ್ ಸೇರಿದಂತೆ ಇನ್ನಿತರರು ಹಾಜರಿದ್ದರು.