ಚೆಟ್ಟಳ್ಳಿ, ಜು. ೧೪: ರಾಜ್ಯ ಸರ್ಕಾರ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಜಾರಿಗೊಳಿಸಿ, ಸೇವಾ ಸಿಂಧು ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದರೂ, ಹಲವು ವಿದ್ಯಾರ್ಥಿಗಳು ಮತ್ತು ಪೋಷಕರು ಅರ್ಜಿ ಸಲ್ಲಿಸುವ ವೇಳೆ ತಾಂತ್ರಿಕ ಸಮಸ್ಯೆ ಎದುರಿಸುತ್ತಿದ್ದಾರೆ.

ಪೋರ್ಟಲ್‌ನಲ್ಲಿ ಲಾಗಿನ್ ಆಗದಿರುವುದು, ವಿದ್ಯಾರ್ಥಿಗಳ ವಿವರಗಳು ಕಾಣಿಸದಿರುವುದು, ಅರ್ಜಿ ಪೂರ್ಣಗೊಳಿಸಲು ಸಾಧ್ಯವಾಗದಿರುವುದು ಸೇರಿದಂತೆ ವಿವಿಧ ಸಮಸ್ಯೆಗಳು ಎದುರಾಗುತ್ತಿವೆ ಎಂದು ಪೋಷಕರು ತಿಳಿಸಿದ್ದಾರೆ.

ಸರ್ಕಾರವು ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಅಗತ್ಯವಿದ್ದರೆ ಕರ್ನಾಟಕ ಒನ್, ಗ್ರಾಮ ಒನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ತಾಂತ್ರಿಕ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಿ, ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದೆ ಉಚಿತ ಬಸ್ ಪಾಸ್ ಪಡೆಯುವಂತೆ ಸಂಬAಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಪೋಷಕರು ಹಾಗೂ ಸಾರ್ವಜನಿಕರು ಆಗ್ರಹಿಸಿದ್ದಾರೆ.