ಮಡಿಕೇರಿ, ಜು. ೧೪: ಕರ್ನಾಟಕದ ಮಾಜಿ ಸಚಿವ, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಈ ಹಿಂದೆ ಕಾರ್ಯನಿರ್ವಹಿಸಿದ್ದ ರಾಮಚಂದ್ರಗೌಡ ಅವರು ತಾ. ೧೪ ರಂದು ಬೆಂಗಳೂರಿನಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆ. ೬.೨೦ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ೨೦೦೬ರಲ್ಲಿ ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಸಮ್ಮಿಶ್ರ ಸರಕಾರವಿದ್ದ ಸಂದರ್ಭದಲ್ಲಿ ರಾಮಚಂದ್ರ ಗೌಡ ಅವರು ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದು, ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ನಡೆದಿದ್ದ
೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಮಂಗಳಾದೇವಿನಗರ ದುರಂತ ಘಟನೆ ಸಂದರ್ಭದಲ್ಲಿ ಇವರು ಪರಿಸ್ಥಿತಿ ನಿಭಾಯಿಸುವಲ್ಲಿ ಪಾತ್ರ ವಹಿಸಿದ್ದರು. ಆರಂಭದಲ್ಲಿ ೧೯೭೦ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರಾಗಿದ್ದ ಇವರು ನಂತರ ೧೯೮೮ರಿಂದ ಬೆಂಗಳೂರು ಪದವೀಧರ ಕ್ಷೇತ್ರದಿಂದ ಐದು ಬಾರಿ ಎಂಎಲ್‌ಸಿಯಾಗಿ ಬಿಜೆಪಿಯಿಂದ ಚುನಾಯಿತರಾಗಿದ್ದರು. ಇವರ ನಿಧನಕ್ಕೆ ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ, ಮಾಜಿ ಎಂಎಲ್‌ಸಿ ಸುನಿಲ್ ಸುಬ್ರಮಣಿ ಅವರುಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಪಕ್ಷದಲ್ಲಿನ ಹಿರಿಯ ಮುಖಂಡರಾಗಿದ್ದ ಇವರು ಪಕ್ಷ ಕಟ್ಟುವಲ್ಲಿ ಶ್ರಮಿಸುವುದರೊಂದಿಗೆ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ ಎಂದು ಇವರುಗಳು ಸ್ಮರಿಸಿದ್ದಾರೆ.