ಮಡಿಕೇರಿ, ಜು. ೧೪: ಯುನೈಟೆಡ್ ಕೊಡವ ಅರ್ಗನೈಜೇಷನ್ ಸಂಘಟನೆಯಿAದ ಸಂಘಟನೆ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಅವರ ನೇತೃತ್ವದಲ್ಲಿ ನಿಯೋಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿ ಕೊಡವ ಸಮುದಾಯದ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿತು.

ಕಳೆದ ೨೦೨೬ - ೨೦೨೭ನೇ ಸಾಲಿನ ಮುಂಗಡ ಪತ್ರದಲ್ಲಿ ಕೊಡವ ಜನಾಂಗದ ಸಮಗ್ರ ಶ್ರೇಯೋಭಿವೃದ್ಧಿಗಾಗಿ ನೂತನವಾಗಿ “ಕೊಡವ ಅಭಿವೃದ್ಧಿ ನಿಗಮ”ವನ್ನು ಘೋಷಣೆ ಮಾಡಲಾಗಿದೆ. ಇದೀಗ ಈ ನಿಗಮವನ್ನು ಸ್ಥಾಪಿಸಿ, ಸೂಕ್ತ ಅನುದಾನವನ್ನು ಬಿಡುಗಡೆ ಮಾಡುವುದರೊಂದಿಗೆ ಕೊಡವ ಜನಾಂಗದ ಶ್ರೇಯೋಭಿವೃದ್ಧಿಗೆ ಅನುವು ಮಾಡಿಕೊಡಬೇಕಾಗಿ ಕೋರಲಾಯಿತು.

ಪ್ರಸ್ತುತ ಕೊಡವ ಜನಾಂಗವು ಹಿಂದುಳಿದ ವರ್ಗಗಳ ರಾಜ್ಯ ಪಟ್ಟಿಯಲ್ಲಿ ಪ್ರವರ್ಗ ೩ಎ ಅಡಿಯಲ್ಲಿ ವರ್ಗೀಕರಣಗೊಂಡಿದ್ದು, ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಗಾಗಿ ಅರ್ಹತೆಯನ್ನು ಪಡೆದುಕೊಂಡಿರುವುದಾಗಿರುತ್ತದೆ. ಆದರೆ ಕೊಡವ ಜನಾಂಗವನ್ನು ಕೇಂದ್ರ ಸರ್ಕಾರದ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಿಂದ ಕೈಬಿಡಲಾಗಿದ್ದು, ಕೇಂದ್ರ ಸರ್ಕಾರದ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿಯಿಂದ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ವಂಚಿತರಾಗಿರುವುದು ವಿಷಾದನೀಯ. ಆದ್ದರಿಂದ ಕೊಡವ ಜನಾಂಗವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರದ ಸೂಕ್ತ ಶಿಫಾರಸ್ಸಿನ ಅಗತ್ಯವಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೊಡವರನ್ನು ಕೇಂದ್ರದ ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವಂತೆ ಹಿಂದುಳಿದ ವರ್ಗಗಳ ಕೇಂದ್ರ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಲಾಯಿತು. ಇದರೊಂದಿಗೆ ಕೊಡಗು ಜಿಲ್ಲೆಯ ವೀರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕರಾದ ಎ. ಎಸ್. ಪೊನ್ನಣ್ಣ ಅÀವರನ್ನು ತಮ್ಮ ಸಂಪುಟದಲ್ಲಿ ಸಚಿವರನ್ನಾಗಿ ಮಾಡುವುದರ ಮೂಲಕ ಕ್ಷೇತ್ರದ ಜನರ ಮಹತ್ತರವಾದ ನಿರೀಕ್ಷೆಯನ್ನು ಈಡೇರಿಸಬೇಕೆಂದು ಮನವಿ ಮಾಡಿ ಮನವಿ ಪತ್ರವನ್ನು ಸಲ್ಲಿಸಲಾಯಿತು.

ನಿಯೋಗದಲ್ಲಿ ಅಪ್ಪಾರಂಡ ವೇಣು ಪೊನ್ನಪ್ಪ, ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ನೆಲ್ಲಮಕ್ಕಡ ಜೆಫ್ರಿ ಮಾದಯ್ಯ, ಚೊಟ್ಟೆಯಂಡ ಸಂಜು ಕಾವೇರಪ್ಪ, ಮಚ್ಚಾಮಾಡ ರಮೇಶ್, ಪಾಲೇಂಗಡ ಅಮಿತ್ ಭೀಮಯ್ಯ, ಬಾದುಮಂಡ ವಿಷ್ಣು ಕಾರ್ಯಪ್ಪ, ಕೊಟ್ಟಂಗಡ ಮೊಣ್ಣಪ್ಪ, ಮಲ್ಲಮಾಡ ದೇವಯ್ಯ, ಅರೆಯಡ ಲೋಕೇಶ್, ಕಳ್ಳಿಚಂಡ ದೀನ ಉತ್ತಪ್ಪ, ಕುಂಜಿಲAಡ ಗ್ರೇಸಿ ಪೂಣಚ್ಚ, ಪಾಂಡAಡ ಸ್ವಾತಿ ರಮೇಶ್, ಕಳ್ಳಿಚಂಡ ತನ್ವಿ ಉತ್ತಪ್ಪ ಪಾಲ್ಗೊಂಡಿದ್ದರು.