ನಾಪೋಕ್ಲು, ಜು. ೧೪: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ಸಮುದಾಯ ವೈದ್ಯಶಾಸ್ತ್ರ ವಿಭಾಗ ಹಾಗೂ ಪುನಶ್ಚೇತನ ಚಾರಿಟೇಬಲ್ ಟ್ರಸ್ಟ್, ನಾಪೋಕ್ಲು ಇವರ ಸಂಯುಕ್ತ ಆಶ್ರಯದಲ್ಲಿ ವಿಶೇಷ ಚೇತನರಿಗಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಮುದಾಯ ವೈದ್ಯಶಾಸ್ತç ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ರಾಮಚಂದ್ರ ಕಾಮತ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿಶೇಷ ಚೇತನರಿಗೆ ಗುಣಮಟ್ಟದ ಹಾಗೂ ಸಮಾನ ಆರೋಗ್ಯ ಸೇವೆಗಳನ್ನು ತಲುಪಿಸುವ ಅಗತ್ಯತೆ ಬಗ್ಗೆ ಒತ್ತಿಹೇಳಿದರು. ಸಮಾಜದ ಎಲ್ಲಾ ವರ್ಗಗಳ ಸಹಕಾರದಿಂದ ವಿಶೇಷ ಚೇತನರ ಆರೋಗ್ಯ, ಶಿಕ್ಷಣ ಮತ್ತು ಪುನರ್ವಸತಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲಾ ಬಿ.ಆರ್, ನಾಪೋಕ್ಲು ಗ್ರಾಮ ಪಂಚಾಯಿತಿಯಿAದ ಬಿ.ಬಿ ಸುಬ್ಬಯ್ಯ , ಓಂಪ್ರಕಾಶ್ ಗಿಖW ಸಪೋರ್ಟ್ ಹಾಗೂ ಪುನಶ್ಚೇತನ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಬಾಳೆಯಡ ದಿವ್ಯಾ ಭಾಗವಹಿಸಿ ಮಾತನಾಡಿದರು. ಸರ್ಕಾರದಿಂದ ವಿಶೇಷ ಚೇತನರಿಗಾಗಿ ಜಾರಿಯಲ್ಲಿರುವ ವಿವಿಧ ಯೋಜನೆಗಳು, ಸೌಲಭ್ಯಗಳು ಹಾಗೂ ಪುನರ್ವಸತಿ ಸೇವೆಗಳ ಕುರಿತು ಮಾಹಿತಿ ನೀಡಿ, ಇದರ ಸದುಪಯೋಗಪಡೆದುಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಿಶೇಷ ಚೇತನರಿಗೆ ಆರೋಗ್ಯ ತಪಾಸಣೆ, ವೈದ್ಯಕೀಯ ಸಲಹೆ, ಆರೋಗ್ಯ ಶಿಕ್ಷಣ ಹಾಗೂ ಅಗತ್ಯ ಮಾರ್ಗದರ್ಶನ ನೀಡಲಾಯಿತು.