ಮಡಿಕೇರಿ, ಜು. ೧೪: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಪ್ರವೇಶ ೦೨/೨೦೨೭ರ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ. ೫೦ ರಷ್ಟು ಅಂಕಗಳೊAದಿಗೆ ತೇರ್ಗಡೆಯಾಗಿರಬೇಕು. ಅಥವಾ ಡಿಪ್ಲೋಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟಿçಕಲ್, ಎಲೆಕ್ಟಾçನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‌ಸ್ಟುçಮೆಂಟ್ ಟೆಕ್ನಾಲಜಿ, ಇನ್ಪಾರ್ಮೇಶನ್ ಟೆಕ್ನಾಲಜಿಯಲ್ಲಿ ಶೇ. ೫೦ ರಷ್ಟು ಅಂಕಗಳೊAದಿಗೆ ತೇರ್ಗಡೆಯಾಗಿರಬೇಕು. ಇಲ್ಲವೇ ಎರಡು ವರ್ಷದ ವೃತ್ತಿಪರ ಕೋರ್ಸ್ಗಳಲ್ಲಿ ಭೌತಶಾಸ್ತç ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.೫೦ ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ. ೫೦ ರಷ್ಟು ಅಂಕಗಳೊAದಿಗೆ ತೇರ್ಗಡೆಯಾಗಿರಬೇಕು.
ವಯೋಮಿತಿ: ಅಭ್ಯರ್ಥಿಯು ೨೦೦೫ ಜುಲೈ ೧ ರಿಂದ ೨೦೧೦ ರ ಜನವರಿ ೧ ರ ನಡುವೆ ಜನಿಸಿರಬೇಕು. (ಎರಡೂ ದಿನಾಂಕಗಳು ಸೇರಿದಂತೆ) ಅರ್ಜಿ ಶುಲ್ಕ ರೂ. ೫೫೦ ಗಳಾಗಿದೆ. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರ ಮತ್ತು ಸೂಚನೆಗಳಿಗೆ ವೆಬ್‌ಸೈಟ್ hಣಣಠಿs://iಚಿಜಿಡಿeಛಿಡಿuiಣmeಟಿಣ.eಜಛಿiಟ.ಛಿo.iಟಿ ನ ಮುಖಾಂತರ ಮಾಹಿತಿ ಪಡೆಯಬಹುದು. ಹಾಗೆಯೇ ವೆಬ್‌ಸೈಟ್‌ನಲ್ಲಿ ೨೦೨೬ ರ ಜುಲೈ ೬ ರಿಂದ ೨೦೨೬ ರ ಜುಲೈ ೨೬ ರೊಳಗೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಪರೀಕ್ಷೆಯು ೨೦೨೬ ರ ಸೆಪ್ಟೆಂಬರ್ ೨೨ ಮತ್ತು ೨೩ ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ತಿಳಿಸಿದ್ದಾರೆ.