ಕೂಡಿಗೆ, ಜು. ೧೪: ಕೂಡಿಗೆ ಸೈನಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಸಮಾವೇಶವಾದ ಕೋಡಾಕ್ (ಏಔಆಂAಅ) ಆಯೋಜಿಸಿದ್ದು, ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪ್ರಸ್ತುತ ಶಾಲಾ ಸಿಬ್ಬಂದಿ ವರ್ಗದವರು ಸೌಹಾರ್ದತೆ, ಸಂಪ್ರದಾಯ ಮತ್ತು ಸಾಧನೆಗಳನ್ನು ಹಂಚಿಕೊಳ್ಳಲು ಒಂದೆಡೆ ಸೇರಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಕುವೆಂಪು ವಿವಿಧೊದ್ದೇಶ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ಬ್ಯಾಚ್‌ಗಳ ಹಳೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್, ದಿವ್ಯಾ ಸಿಂಗ್ ಮತ್ತು ಕೋಡಾಕ್ ಅಸೋಸಿಯೇಷನ್ (ಹಳೇ ವಿದ್ಯಾರ್ಥಿಗಳ ಸಂಘದ) ಅಧ್ಯಕ್ಷ ಶಫೀವುಲ್ಲಾ ದೀಪ ಬೆಳಗುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಶಫೀವುಲ್ಲಾ, ಸಂಸ್ಥೆಯೊAದಿಗಿನ ಬಾಂಧವ್ಯವನ್ನು ಬಲಪಡಿಸಲು ಮತ್ತು ಶಾಲೆಯ ಬೆಳವಣಿಗೆಗೆ ಹಳೆ ವಿದ್ಯಾರ್ಥಿಗಳ ಸಂಘ ಕೈಗೊಂಡಿರುವ ವಿವಿಧ ಕಾರ್ಯಗಳ ಕುರಿತು ವಿವರಿಸಿದರು.

ಕರ್ನಲ್ ಅಮರ್ ಜೀತ್ ಸಿಂಗ್ ಸ್ವಾಗತಿಸಿ, ಸಂಸ್ಥೆಯೊAದಿಗಿನ ನಿರಂತರ ಸಂಬAಧವನ್ನು ಶ್ಲಾಘಿಸಿದರು. ಮಹಿಳಾ ಹಳೆ ವಿದ್ಯಾರ್ಥಿಗಳ ಹೆಚ್ಚುತ್ತಿರುವ ಭಾಗವಹಿಸುವಿಕೆಯನ್ನು ಪ್ರತಿಬಿಂಬಿಸಲು ಸಂಘದ ಹೆಸರನ್ನು ಓಲ್ಡ್ ಬಾಯ್ಸ್ ಅಂಡ್ ಗರ್ಲ್ಸ್ ಅಸೋಸಿಯೇಷನ್ (ಔಃಉಂ) ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಅವರು ಮಂಡಿಸಿದರು. ಸೈನಿಕ ಶಾಲೆ ಕೊಡಗು ದೇಶದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಸೈನಿಕ ಶಾಲೆಗಳಲ್ಲಿ ಒಂದಾಗಿದೆ ಎಂದು ತಿಳಿಸಿದ ಅವರು, ಶಾಲೆಯು ಚಾರಿತ್ರ‍್ಯ ನಿರ್ಮಾಣ, ಶೈಕ್ಷಣಿಕ ಶ್ರೇಷ್ಠತೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಒತ್ತಿ ಹೇಳಿದರು. ಭಾರತೀಯ ನೌಕಾಪಡೆಯ ಸ್ಕಾ÷್ವಡ್ರನ್ ಲೀಡರ್ ದೀಪಕ್ ನಾಯಕ್ ಅವರು ಸೆಪ್ಟೆಂಬರ್‌ನಲ್ಲಿ ಆಡಳಿತಾಧಿಕಾರಿಯಾಗಿ ಸೇರಲಿದ್ದಾರೆ ಎಂಬ ವಿಷಯವನ್ನು ಹಂಚಿ ಕೊಂಡರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೆಡೆಟ್‌ಗಳು ಸುಮಧುರ ಗೀತಗಾಯನ, ರಾಮಾಯಣದ ಪ್ರಸಂಗಗಳನ್ನು ಬಿಂಬಿಸುವ ಆಕರ್ಷಕ ನೃತ್ಯ ಮತ್ತು ಚಂಡೆ ಮೇಳವನ್ನು ಪ್ರಸ್ತುತಪಡಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭವೂ ನಡೆಯಿತು. ಕರ್ನಲ್ ಅಮರ್ ಜೀತ್ ಸಿಂಗ್ ಅವರು ೨೦೨೫-೨೬ನೇ ಸಾಲಿನ ಅಕಾಡೆಮಿಕ್ ಸಾಧನಾ ಟ್ರೋಫಿ, ಯುಪಿಎಸ್‌ಸಿ ಪರೀಕ್ಷೆಯ ಸಾಧನಾ ಟ್ರೋಫಿ ಮತ್ತು ಒಟ್ಟಾರೆ ಶ್ರೇಷ್ಠತೆಗಾಗಿ ಕಠಾರಿ ಹೌಸ್‌ಗೆ ಕಾಕ್ ಹೌಸ್ ಟ್ರೋಫಿಯನ್ನು ಪ್ರದಾನ ಮಾಡಿದರು. ಕೃತಜ್ಞತೆಯ ಸಂಕೇತವಾಗಿ ಶಫೀವುಲ್ಲಾ ಅವರು ಪ್ರಾಂಶುಪಾಲರಿಗೆ ಸ್ಮರಣಿಕೆಯನ್ನು ನೀಡಿದರು. ನಿವೃತ್ತ ಸಮಾಜ ವಿಜ್ಞಾನ ಶಿಕ್ಷಕರಾದ ದಕ್ಷಿಣಾಮೂರ್ತಿ ಮತ್ತು ಆಗಸ್ಟ್ನಲ್ಲಿ ನಿವೃತ್ತರಾಗಲಿರುವ ನೌಕರ ಮಲ್ಲಿಕಾರ್ಜುನ್ ಅವರ ಸೇವೆಯನ್ನು ಗುರುತಿಸಿ ಹಳೆ ವಿದ್ಯಾರ್ಥಿಗಳ ಸಂಘವು ಸನ್ಮಾನಿಸಿತು.

ಹಳೆ ವಿದ್ಯಾರ್ಥಿಗಳ ಪರವಾಗಿ ಸುನೀಲ್ ಕರಳೆ ಮಾತನಾಡಿದರು. ಹಳೆ ವಿದ್ಯಾರ್ಥಿಗಳು ಮತ್ತು ಶಾಲಾ ತಂಡಗಳ ನಡುವೆ ನಡೆದ ಸೌಹಾರ್ದ ಫುಟ್‌ಬಾಲ್ ಮತ್ತು ಹಾಕಿ ಪಂದ್ಯಗಳೊAದಿಗೆ ಮುಕ್ತಾಯಗೊಂಡಿತು. ಈ ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ, ಹಿರಿಯ ಶಿಕ್ಷಕ ಎನ್. ವಿಬಿನ್ ಕುಮಾರ್, ಬೋಧಕ ಮತ್ತು ಆಡಳಿತ ಸಿಬ್ಬಂದಿ, ಎನ್‌ಸಿಸಿ ಪಿಐ ಸಿಬ್ಬಂದಿ ಮತ್ತು ಕೆಡೆಟ್‌ಗಳು ಭಾಗವಹಿಸಿದ್ದರು. ಕೆಡೆಟ್ ಚಿನ್ಮಯ ಧನ್ಯವಾದ ಸಮರ್ಪಿಸಿದರು.