ನಾಪೋಕ್ಲು, ಜು. ೧೪: ಕೊಡಗು ಜಿಲ್ಲಾ ಅಕ್ಕ ಪಡೆ ಸಿಬ್ಬಂದಿಗಳು ಚೆಯ್ಯಂಡಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಸುರಕ್ಷತೆ ಹಾಗೂ ಶುಚಿತ್ವದ ಬಗ್ಗೆ ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಮಾರ್ಗದರ್ಶನ ಮಾಡಿದರು.
ಚೆಯ್ಯಂಡಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲಾವರ ಜಲಪಾತ ಹಾಗೂ ಕಬ್ಬೆ ಬೆಟ್ಟ ಪ್ರವಾಸಿ ಪ್ರದೇಶಗಳಿಗೆ ಭೇಟಿ ನೀಡಿ ಜಲಪಾತ ಸೇರಿದಂತೆ ನೀರಿಗೆ ಅನವಶ್ಯಕವಾಗಿ ಇಳಿಯದಂತೆ ಹಾಗೂ ಶುಚಿತ್ವ ಕಾಪಾಡುವಂತೆ ಮಾರ್ಗದರ್ಶನ ಮಾಡಲಾಯಿತು. ತುರ್ತು ಸಂದರ್ಭಗಳಲ್ಲಿ ಸಹಾಯವಾಣಿಯನ್ನು ಸಂಪರ್ಕಿಸುವAತೆ ಜಾಗೃತಿಯನ್ನು ಮೂಡಿಸಿದರು.