ಕುಶಾಲನಗರ, ಜು. ೧೪: ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಎಸ್‌ಐಆರ್ ಅಭಿಯಾನದಲ್ಲಿ ಮನೆಮನೆಗೆ ತೆರಳಿ ಶೇ ೯೯ ರಷ್ಟು ಅರ್ಜಿ ನಮೂನೆಗಳನ್ನು ನೀಡುವ ಗುರಿ ಸಾಧಿಸಲಾಗಿದೆ ಮತ್ತು ಶೇ ೩೦ರಷ್ಟು ಮತದಾರರ ಅರ್ಜಿಗಳನ್ನು ಸ್ವೀಕರಿಸಿ ಡಿಜಿಟಲೀಕರಣ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್ ಜೆ ಸೋಮಶೇಖರ್ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕುರಿತು ನಡೆದ ಬೃಹತ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು; ಅನರ್ಹ ಜನರು ಪಟ್ಟಿಯಲ್ಲಿ ಸೇರ್ಪಡೆಗೊಳ್ಳದಂತೆ ಎಚ್ಚರ ವಹಿಸಬೇಕಾಗಿದೆ ಎಂದರು. ಕುಶಾಲನಗರ ಬೈಚನಹಳ್ಳಿ ಬಳಿ ಮಾರಿಯಮ್ಮ ದೇವಾಲಯದಿಂದ ಜಾಥಾಕ್ಕೆ ಜಿಲ್ಲಾಧಿಕಾರಿಗಳು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಕಲಾವಿದ ಈ. ರಾಜು ಅವರ ತಂಡದಿAದ ಬೀದಿ ನಾಟಕದ ಮೂಲಕ ಜನರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಅರಿವು ಮೂಡಿಸಲಾಯಿತು. ಸ್ಥಳೀಯ ಶಾಲಾ ಕಾಲೇಜು ಸ್ಕೌಟ್ಸ್ ಗೈಡ್ಸ್ ರೋಟರಿ, ಫಾತಿಮಾ ಪ್ರೌಢಶಾಲೆ ವಿದ್ಯಾರ್ಥಿಗಳು, ಸರ್ಕಾರಿ ಅಧಿಕಾರಿ ಸಿಬ್ಬಂದಿ ಮತ್ತು ಪುರಸಭೆ ಪೌರಕಾರ್ಮಿಕರು ಸಿಬ್ಬಂದಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿಗಳೊAದಿಗೆ ಜಾಥಾದಲ್ಲಿ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಣಿ, ಅರಣ್ಯ ಇಲಾಖೆಯ ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ವಿ, ಅರಣ್ಯ ಇಲಾಖೆ ಪ್ರೊಭೆಷನರಿ ಅಧಿಕಾರಿ ಸೆಂದಿಲ್, ಜಿ.ಪಂ. ಮುಖ್ಯ ಕಾರ್ಯನಿರ್ವಾಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ಕೃಷ್ಣಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್, ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಟಿ ಎಸ್ ಗಿರೀಶ್ ಮತ್ತಿತರ ಅಧಿಕಾರಿ ಸಿಬ್ಬಂದಿ ಪಾಲ್ಗೊಂಡಿದ್ದರು.