ಕುಶಾಲನಗರ, ಜು. ೧೪: ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಆಟದ ಮೈದಾನ ಸೇರಿದಂತೆ ಗ್ಯಾಲರಿ ನಿರ್ಮಾಣ ಮತ್ತು ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರಾದ ಡಾ. ಮಂತರ್ ಗೌಡ ಹೇಳಿದರು. ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ನಾಲ್ಕು ಕೋಟಿ ರೂ ಅನುದಾನದಲ್ಲಿ ನಿರ್ಮಾಣವಾದ ನೂತನ ಹೆಚ್ಚುವರಿ ಕಟ್ಟಡ ಹಾಗೂ ಕಾಲೇಜು ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿದರು.

ಕುಶಾಲನಗರ ಕೈಗಾರಿಕಾ ಬಡಾವಣೆಯಲ್ಲಿ ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ನಂತರ ಸ್ವಯಂ ಉದ್ಯಮಗಳನ್ನು ಆರಂಭಿಸಲು ಚಿಂತನೆ ಹರಿಸಬೇಕು, ತಾಂತ್ರಿಕವಾಗಿ ಯೋಜನೆ ರೂಪಿಸಿ ಅದನ್ನು ಅನುಷ್ಠಾನಕ್ಕೆ ತರುವ ಯತ್ನ ಆಗಬೇಕು.

ಜಿಲ್ಲಾ ಮಟ್ಟದ ಕ್ಯಾಂಪಸ್ ರಿಕ್ರೂಟ್ಮೆಂಟ್ ಶಿಬಿರಕ್ಕೆ ಸಲಹೆ ನೀಡಿದ ಶಾಸಕರು ವಿದ್ಯಾರ್ಥಿಗಳು ಅವಕಾಶದ ಸದುಪಯೋಗ ಪಡೆಯಬೇಕು ಆರಂಭದಲ್ಲಿ ಸಂಬಳಕ್ಕಿAತ ಅನುಭವವನ್ನು ಪಡೆಯುವತ್ತ ಗಮನ ಹರಿಸಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ. ಪಿ. ಶಶಿಧರ್, ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರ ಶಾಸಕರಾದ ಮಂತರ್ ಗೌಡ ಅವರು ಅಂದಾಜು ಇನ್ನೂರ ಐವತ್ತು ಕೋಟಿಗೂ ಅಧಿಕ ಅನುದಾನಗಳ ಮೂಲಕ ತಾಲೂಕಿನಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿರುವ ಬಗ್ಗೆ ಮಾಹಿತಿ ಒದಗಿಸಿದರು.

ಪ್ರಜಾ ಸೌಧ ಕಾಮಗಾರಿ ಅಂದಾಜು ಎಂಟು ಕೋಟಿ ರೂ ವೆಚ್ಚದಲ್ಲಿ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ನಡೆಯುತ್ತಿದ್ದು ಅತಿ ವೇಗವಾಗಿ ಕಾಮಗಾರಿ ನಡೆಯುತ್ತಿದೆ. ನೀರಾವರಿ ಇಲಾಖೆಯಲ್ಲಿ ಸುಮಾರು ೨೦೦ ಕೋಟಿಗೂ ಅಧಿಕ ಅನುದಾನದಲ್ಲಿ ಯೋಜನಾ ಕಾಮಗಾರಿಗಳು ಚಾಲನೆಯಲ್ಲಿವೆ.

ಕುಶಾಲನಗರ ಹಾರಂಗಿ ರಸ್ತೆಯಲ್ಲಿ ೧೦೦ ಹಾಸಿಗೆಗಳ ತಾಲೂಕು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ೪೨ ಕೋಟಿ ರೂಗಳನ್ನು ಮೀಸಲಿರಿಸಲಾಗಿದೆ ಎಂದು ವಿವರ ನೀಡಿದ ಶಶಿಧರ್ ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕದ ಅಭಿವೃದ್ಧಿ ಕಾಮಗಾರಿಗಳಿಗೆ ಸುಮಾರು ೪೨ ಕೋಟಿ ರೂಗಳ ಅನುದಾನ ಕಲ್ಪಿಸಲಾಗಿದೆ ಎಂದು ಮಾಹಿತಿಯಿತ್ತರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾತನಾಡಿ, ಕಳೆದ ೨೫ ವರ್ಷಗಳಲ್ಲಿ ಕ್ಷೇತ್ರದಲ್ಲಿ ಕಾಣದ ಅಭಿವೃದ್ಧಿ ಈಗ ನಡೆಯುತ್ತಿದ್ದು, ಮಂತರ್‌ಗೌಡ ಅವರು ವಿಶೇಷ ಅನುದಾನಗಳನ್ನು ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಈ ಸಂದರ್ಭ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಸರಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಸತೀಶ್ ಕಾಳೇಗೌಡ ಸರಕಾರಿ ಇಂಜಿನಿಯರಿAಗ್ ಕಾಲೇಜು ಪ್ರಾಂಶುಪಾಲ ಡಾ ಪರಶಿವಮೂರ್ತಿ, ಡಾ ಸತೀಶ್, ಡಾ. ಸೀನಪ್ಪ, ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಹೆಚ್ ವಿ ಶಿವಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ಪ್ರಮುಖರಾದ ನಟೇಶ್ ಗೌಡ, ಸಜಿ, ಎಂ.ಕೆ ದಿನೇಶ್, ಬಿ.ಎಸ್ ಚಂದ್ರಶೇಖರ್ ದಾಮೋದರ್ ಮತ್ತಿತರರು ಇದ್ದರು. ಪ್ರಾಧ್ಯಾಪಕರಾದ ಸುಷ್ಮಾ ಪ್ರಾರ್ಥಿಸಿ, ಪ್ರಾಧ್ಯಾಪಕ ಜಯಣ್ಣ ಕಾರ್ಯಕ್ರಮ ನಿರೂಪಿಸಿದರು.