ಚೆಯ್ಯಂಡಾಣೆ, ಜು. ೧೪: ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ವತಿಯಿಂದ ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಲಿಟಲ್ ಸ್ಕಾಲರ್ಸ್ ಅಕಾಡಮಿಯು ಹಲವಾರು ಸಾಮಾಜಿಕ ಚಟುವಟಿಕೆಗಳನ್ನು ಆಯೋಜಿಸುತ್ತಾ ಬಂದಿದ್ದು ಈ ಬಾರಿ ವಿದ್ಯಾಸಂಸ್ಥೆಯಲ್ಲಿ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಎಲ್.ಎಸ್.ಎ ಕೇರ್ ಎಂಬ ಘಟಕವನ್ನು ಆರಂಭಿಸಲಾಗಿದೆ. ಈ ಘಟಕದ ವತಿಯಿಂದ ಪ್ರಪ್ರಥಮವಾಗಿ ಪೀಪಲ್ ಹೌಸ್ ವಿದ್ಯಾರ್ಥಿ ತಂಡದ ಕಾರ್ಯಕ್ರಮದಡಿಯಲ್ಲಿ ಹೆಗ್ಗಳದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಹಾಗೂ ಸಮಾಜ ಸೇವಕರಾದ ಪೂಜಾ ಸಜೇಶ್ ಅವರು ವಿತರಿಸಿದರು.
ನಂತರ ಮಾತನಾಡಿದ ಪೂಜಾ ಸಜೇಶ್, ಪ್ರತೀ ತಿಂಗಳು ಎಲ್.ಎಸ್.ಎ ಕೇರ್ ಮೂಲಕ ತಿಂಗಳಿಗೊAದು ವೈವಿಧ್ಯಮಯ ಸಮಾಜಮುಖಿ ಕಾರ್ಯಕ್ರಮವನ್ನು ಆಯೋಜಿಸುವ ಉದ್ದೇಶವನ್ನು ಸಂಸ್ಥೆಯು ಹೊಂದಿದೆ. ಈ ಹಿಂದೆಯೂ ಹೆಗ್ಗಳ ಗ್ರಾಮದ ಸರ್ಕಾರಿ ಶಾಲೆ ಹಾಗೂ ಇತರೆಡೆಗಳಲ್ಲಿ ಸಂಸ್ಥೆಯಿAದ ಸಾಮಾಜಿಕ ಕಾರ್ಯಕ್ರಮಗಳು ನಡೆದಿದ್ದು, ಇನ್ನು ಮುಂದೆಯೂ ಅದನ್ನು ಮುಂದುವರೆಸಿಕೊAಡು ಹೋಗಲಾಗುವುದು ಎಂದು ಹೇಳಿದರು. ಗ್ರಾಮೀಣ ವಿದ್ಯಾರ್ಥಿಗಳು ಮತ್ತಷ್ಟು ಶೈಕ್ಷಣಿಕ ಸಾಧನೆಗಳನ್ನು ಮಾಡುವಂತಾಗಲಿ ಎಂದು ಶುಭ ಕೋರಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೀರಾಜಪೇಟೆ ಹಾಗೂ ಕಳ್ತೋಡು ಸಿಆರ್‌ಪಿ ಸೈಫುನ್ನಿಸ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಲಿಟಲ್ ಸ್ಕಾಲರ್ಸ್ ಅಕಾಡಮಿಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಜೊತೆಗೆ ಹೆಗ್ಗಳ ಶಾಲೆಯ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವ, ಶಾಲೆಯ ಮಹತ್ವದ ಬಗ್ಗೆ ತಿಳಿಸಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಕಮಲಮ್ಮ, ಸಹ ಶಿಕ್ಷಕಿ ಕಮರುನ್ನಿಸ, ಎಸ್‌ಡಿಎಂಸಿ ಸದಸ್ಯರುಗಳು ಹಾಗೂ ಉಭಯ ಶಾಲೆಗಳ ವಿದ್ಯಾರ್ಥಿಗಳು, ಶಿಕ್ಷಕರುಗಳು ಉಪಸ್ಥಿತರಿದ್ದರು.