ಮಡಿಕೇರಿ, ಜು. ೧೪ : ಮೂರ್ನಾಡು ೩೩/೧೧ ಕೆ.ವಿ ವಿದ್ಯುತ್ ವಿತರಣಾ ಉಪ ಕೇಂದ್ರದಿAದ ಹೊರಹೊಮ್ಮುವ ಎಫ್೩ ಮೂರ್ನಾಡು ಫೀಡರ್‌ನಲ್ಲಿ ತಾ. ೧೫ ರಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲ ಬಲವರ್ಧನೆ ಹಾಗೂ ಮಳೆಗಾಲ ಮುಂಜಾಗೃತಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿ ರುವುದರಿಂದ ಈ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಮೂರ್ನಾಡು ಟೌನ್, ಕಿಗ್ಗಾಲು, ಮುತ್ತಾರ್‌ಮುಡಿ, ಬೇತ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
* ಮೂರ್ನಾಡು ೩೩/೧೧ ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರದ ಕೇಂದ್ರದಿAದ ಹೊರಹೊಮ್ಮುವ ಎಫ್೨ ನಾಪೋಕ್ಲು, ಎಫ್೫ ಹೊದ್ದೂರು ಹಾಗೂ ಎಫ್೬ ತಲಕಾವೇರಿ ಫೀಡರ್‌ನಲ್ಲಿ ತಾ. ೧೬ ರಂದು ಬೆಳಿಗ್ಗೆ ೯.೩೦ಯಿಂದ ಸಂಜೆ ೪.೩೦ ಗಂಟೆಯವರೆಗೆ ಕೊಡಗು ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಸದರಿ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಹೊದ್ದೂರು, ಕಬಡಗೇರಿ, ಕೊಳಕೇರಿ, ಕುಂಜಿಲ, ಎಮ್ಮೆಮಾಡು, ನೆಲಜಿ, ಬಲ್ಲಮಾವಟಿ, ಪೆರೂರು, ನಾಪೋಕ್ಲು ಟೌನ್, ಕೊಟ್ಟಮುಡಿ, ಪಾಲೂರು, ಚೆರಿಯಪರಂಬು, ಹಳೆತಾಲೂಕು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ತಿಳಿಸಿದ್ದಾರೆ.