ಸಿದ್ದಾಪುರ, ಜು.೧೫: ಕಾಡಾನೆಗಳ ಕಾರ್ಯಾಚರಣೆ ಸಂದರ್ಭ ಕಾರ್ಯಾಚರಣೆ ತಂಡದ ಮೇಲೆ ಕಾಡಾನೆಗಳು ದಾಳಿ ನಡೆಸಲು ಮುಂದಾಗಿ ಕೂದಲೆಳೆಯ ಅಂತರದಿAದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಕಾರ್ಮಿಕರು ಪಾರಾದ ಘಟನೆ ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಯಡೂರು ಗ್ರಾಮದಲ್ಲಿ ಬುಧವಾರ ನಡೆದಿದೆ.
ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಯಡೂರು, ಪಲ್ಲಕೆರೆ ಗುಹ್ಯ ಗ್ರಾಮದಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿದ್ದ ಕಾಡಾನೆಗಳನ್ನು ಕಳೆದ ಮೂರು ದಿನಗಳಿಂದ ಕಾಡಿಗಟ್ಟುವ ಕಾರ್ಯಾಚರಣೆಯನ್ನು ನಡೆಸಲಾಯಿತು. ಬುಧವಾರದಂದು ಯಡೂರು ಗ್ರಾಮದಲ್ಲಿ ಕಾಡಾನೆಗಳನ್ನು ಕಾರ್ಯಾಚರಣೆ ಮಾಡಿ ಕಾಡಿಗಟ್ಟಲು ಪ್ರಯತ್ನಿಸಿದಾಗ ಗುಂಪಿನಿAದ ಬೇರ್ಪಟ್ಟು ಕಾಫಿ ತೋಟದೊಳಗೆ ಇದ್ದ ಎರಡು ಕಾಡಾನೆಗಳು ಏಕಾಏಕಿ ಕಾಫಿ ತೋಟದೊಳಗಿನಿಂದ ಆಗಮಿಸಿದ್ದು, ಕಾರ್ಯಾಚರಣೆಯಲ್ಲಿ ಮಗ್ನರಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ದಾಳಿ ನಡೆಸಲು ಮುಂದಾಗಿವೆ.
ಕಾಡಾನೆ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಅರಣ್ಯ ಇಲಾಖೆ ಮೇಲಾಧಿಕಾರಿಗಳು ಮತ್ತು ಕಾರ್ಯಾಚರಣೆ ತಂಡದವರು ಪಾರಾಗಿದ್ದಾರೆ. ಇದಲ್ಲದೆ ಇದೇ ಸಂದರ್ಭ ಎರಡು ಕಾಡಾನೆಗಳು ಕಾರ್ಯಾಚರಣೆ ತಂಡದ ಸಿಬ್ಬಂದಿಗಳನ್ನು ಬೆನ್ನಟ್ಟಿವೆ. ಕಾಡಾನೆಗಳ ದಾಳಿಯನ್ನು ತಪ್ಪಿಸಲು ಮೂರು ಮಂದಿ ಸಿಬ್ಬಂದಿ ಮರಗಳನ್ನು ಏರಿ ಅಪಾಯದಿಂದ ಪಾರಾಗಿದ್ದಾರೆ. ಇದಲ್ಲದೆ ಕಾರ್ಯಾಚರಣೆ ಸಂದರ್ಭ ಒಂದು ಗುಂಪಿನ ಕಾಡಾನೆಗಳು ದಿಢೀರನೇ ಬಂದ ಹಿನ್ನೆಲೆ ಗ್ರಾಮದ ಕಾಫಿ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಕಾಡಾನೆಗಳ ಹಿಂಡನ್ನು ಕಂಡು ದಿಕ್ಕಾಪಾಲಾಗಿ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗ್ಗಿನಿಂದಲೇ ಕಾರ್ಯಾಚರಣೆ ನಡೆಸಿದ ಸಂದರ್ಭ ಯಡೂರು ಗ್ರಾಮದ ವಿವಿಧ ಕಾಫಿ ತೋಟಗಳಲ್ಲಿ ಮರಿಯಾನೆಗಳು ಸೇರಿದಂತೆ ೧೫ಕ್ಕೂ ಅಧಿಕ ಕಾಡಾನೆಗಳು ಕಂಡುಬAದವು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆ ಸಂದರ್ಭ ಕಾಡಿಗೆ ತೆರಳದೆ ಕೆಲವು ಕಾಡಾನೆಗಳು ಗುಂಪಿನಿAದ ಬೇರ್ಪಟ್ಟು ಕಾಫಿ ತೋಟದೊಳಗೆ ಉಳಿದುಕೊಂಡಿವೆ. ಅದಲ್ಲದೆ ಒಂಟಿಸಲಗವೊAದು ಕಾರ್ಯಾಚರಣೆ ತಂಡವನ್ನು ದಿಕ್ಕುತಪ್ಪಿಸಿ ಓಡಾಡುತ್ತಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ದಿನಗಳಿಂದ ಮೂರು ತಂಡಗಳನ್ನು ರಚಿಸಿ, ಬೆಳಗ್ಗಿನಿಂದ ರಾತ್ರಿವರೆಗೆ ನಿರಂತರವಾಗಿ ಕಾಫಿ ತೋಟಗಳಲ್ಲಿ ಸುತ್ತಾಡಿ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕಾರ್ಯಾಚರಣೆ ತಂಡದ ಸಿಬ್ಬಂದಿ ದಣಿದು ಸುಸ್ತಾಗಿರುವ ಹಿನ್ನೆಲೆ ಹಾಗೂ ಕಾಡಾನೆಗಳು ಕಾಡಿಗೆ ತೆರಳದ ಹಿನ್ನೆಲೆ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.
ಕಾರ್ಯಾಚರಣೆಯಲ್ಲಿ ವೀರಾಜಪೇಟೆ ತಾಲೂಕು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಿರುಬನಾಥನ್ ಹಾಗೂ ಎ.ಸಿ.ಎಫ್. ತಾಸೀನ ಬಾನು, ಮಾರ್ಗದರ್ಶನದಲ್ಲಿ ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಂ ನೇತೃತ್ವದಲ್ಲಿ ಉಪ ವಲಯ ಅರಣ್ಯ ಅಧಿಕಾರಿ ಮನೋಜ್ ಹಾಗೂ ಅರಣ್ಯ ಇಲಾಖೆ ಮತ್ತು ಆರ್ಆರ್ಟಿ ತಂಡ ಹಾಗೂ ಆನೆ ಕಾರ್ಯಪಡೆ ತಂಡದ ಸಿಬ್ಬಂದಿ ಭಾಗವಹಿಸಿದ್ದರು.
- ವಾಸು ಎ.ಎನ್.