ಕೂಡಿಗೆ, ಜು. ೧೫: ಹಾಸನ ಹೆದ್ದಾರಿಯ ಕೂಡಿಗೆ ಮುಖ್ಯ ರಸ್ತೆಯಲ್ಲಿ ಕಳೆದ ಒಂದು ವಾರದ ಹಿಂದೆ ರಸ್ತೆ ದಾಟುವ ಸಂದರ್ಭ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೂಡಿಗೆ ಗ್ರಾಮದ ಜಯಮ್ಮ (೬೫) ಎಂಬವರೆ ಮೃತ ದುರ್ದೈವಿ. ಕಾರು ಡಿಕ್ಕಿಯಾದ ಸಂದರ್ಭ ಕುಶಾಲನಗರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.