*ಗೋಣಿಕೊಪ್ಪ, ಜು. ೧೫: ಲಯನ್ಸ್ ವಿದ್ಯಾಸಂಸ್ಥೆಯ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಸಂಘದ ಪದಗ್ರಹಣ ಕಾರ್ಯಕ್ರಮ ಲಯನ್ಸ್ ಚಾರಿಟೆಬಲ್ ಟ್ರಸ್ಟ್ನ ಅಧ್ಯಕ್ಷ ಪಿ.ಟಿ. ಧನು ಉತ್ತಯ್ಯ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷ ಸಿ.ಎಂ. ಅಪ್ಪಣ್ಣ, ಕ್ಲಬ್‌ನ ಅಧ್ಯಕ್ಷ ಶ್ರೀಮಂತ್ ಮುತ್ತಣ್ಣ ಹಾಗೂ ಲಯನ್ಸ್ ಚಾರಿಟೆಬಲ್ ಟ್ರಸ್ಟ್ ಮತ್ತು ಲಯನ್ಸ್ ಕ್ಲಬ್‌ನ ಸದಸ್ಯರುಗಳು ಉಪಸ್ಥಿತ ರಿದ್ದರು. ಕಾರ್ಯ ಕ್ರಮದಲ್ಲಿ ವಿದ್ಯಾರ್ಥಿ ಸಂಘದ ನಾಯಕರಿಗೆ ಬ್ಯಾಡ್ಜ್ಗಳನ್ನು ವಿತರಿಸಲಾಯಿತು.

ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಗಾನ ಸಿ.ಎಸ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜು ವಿದ್ಯಾರ್ಥಿ ನಾಯಕಿ ದಾನಿಕ ದೇಚಮ್ಮ ಎಲ್ಲಾ ವಿದ್ಯಾರ್ಥಿ ನಾಯಕರುಗಳ ಪರವಾಗಿ ಪ್ರತಿಜ್ಞೆ ಸ್ವೀಕರಿಸಿದರು. ಲಯನ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಲತಾ ಸಿ.ಬಿ. ಮತ್ತು ವಿದ್ಯಾಸಂಸ್ಥೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು.

(ಮೊದಲ ಪುಟದಿಂದ) ಸಂದರ್ಭ ೩ ಕಾಡಾನೆಗಳು ಇರುವುದು ಕಂಡುಬAದಿದ್ದು ಇವುಗಳು ಸಮೀಪದ ತೋಟಕ್ಕೆ ತೆರಳಿರುವ ಬಗ್ಗೆ ತಿಳಿದುಬಂದಿದೆ. ಸ್ಥಳೀಯ ಗ್ರಾಮಸ್ಥರು ಮಾತನಾಡಿ ನೆಲ್ಲಿ ಹುದಿಕೇರಿ ಗ್ರಾಮದ ಬರಡಿ ಮತ್ತು ನಲ್ವತ್ತೇಕರೆ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಈ ಹಿಂದೆ ಕಾರ್ಮಿಕ ಮಹಿಳೆಯ ಮೇಲೆ ಹಾಡಹಗಲೇ ದಾಳಿ ನಡೆಸಿದ ಘಟ£ಯೂ ಕೂಡ ನಡೆದಿತ್ತು. ಸಂಜೆಯಾಗುತ್ತಲೇ ವಸತಿ ಪ್ರದೇಶಗಳಲ್ಲಿ ಕಾಡಾನೆಗಳು ಸುತ್ತಾಡುತ್ತಿದ್ದು ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಕೂಡಲೆ ಅರಣ್ಯ ಇಲಾಖೆ ಈ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟುವಂತೆ ಒತ್ತಾಯಿಸಿದ್ದಾರೆ.

- ವಾಸು