ಮಡಿಕೇರಿ, ಜು. ೧೭ : ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯAಡ ವೀಣಾ ಅಚ್ಚಯ್ಯ ಅವರು ಕೊಡಗು ಜಿಲ್ಲಾ ಕಾಂಗ್ರೆಸ್ ವಾರ್ ರೂಮ್ನಲ್ಲಿ ತಮ್ಮ ಎನ್ಯುಮರೇಶನ್ ಫಾರಂ ಭರ್ತಿ ಮಾಡುವ ಮೂಲಕ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಭಾಗಿಯಾದರು. ಜಿಲ್ಲಾ ಕಾಂಗ್ರೆಸ್ ವಾರ್ ರೂಮ್ ಅಧ್ಯಕ್ಷ ತೆನ್ನಿರ ಮೈನಾ ಅವರು ವೀಣಾ ಅಚ್ಚಯ್ಯ ಹಾಗೂ ಅವರ ಕುಟುಂಬದ ಸದಸ್ಯರ ಮತದಾರರ ವಿವರಗಳನ್ನು ಭರ್ತಿ ಮಾಡಿದರು. ಎನ್ಯುಮರೇಶನ್ ಫಾರಂ ಅನ್ನು ಪ್ರತಿಯೊಬ್ಬ ಮತದಾರರು ಭರ್ತಿ ಮಾಡಿ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸುವುದು ಕಡ್ಡಾಯವಾಗಿದ್ದು ಪ್ರತಿಯೊಬ್ಬರು ಎಚ್ಚರಿಕೆಯಿಂದ ಫಾರಂ ಭರ್ತಿ ಮಾಡಬೇಕು.
ಮತದಾರರಿಗೆ ಸಹಕಾರ ನೀಡಲು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಕಾಂಗ್ರೆಸ್ ವಾರ್ ರೂಂ ಮತ್ತು ಸಹಾಯವಾಣಿ ಕೇಂದ್ರಗಳನ್ನು ತೆರೆದಿದ್ದು ಇದರ ಪ್ರಯೋಜನ ಪಡೆಯುವಂತೆ ಸಾರ್ವಜನಿಕರಿಗೆ ವೀಣಾ ಅಚ್ಚಯ್ಯ ಮನವಿ ಮಾಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್ ಉಪಸ್ಥಿತರಿದ್ದರು.