ಮಡಿಕೇರಿ, ಜು. ೧೭: ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಮಡಿಕೇರಿ ವಿಭಾಗ ಸಂಯುಕ್ತಾಶ್ರಯದಲ್ಲಿ ತಾ. ೧೮ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ `ಕಲಾ ನಡಿಗೆ-ಜನರ ಬಳಿಗೆ’ ಸಾಂಸ್ಕöÈತಿಕ ಕಾರ್ಯಕ್ರಮ ನಡೆಯಲಿದೆ.
ಲೋಕೇಶ್ ಸಾಗರ್ ಮತ್ತು ತಂಡದಿAದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಅತಿಥಿಗಳಾಗಿ ಕುಶಾಲನಗರ ತಾಲೂಕು ದಂಡಾಧಿಕಾರಿ ಕೆ.ಕೆ. ಕೃಷ್ಣಪ್ಪ, ಕುಶಾಲನಗರ ವಲಯ ಅರಣ್ಯ ಸಂರಕ್ಷಣಾಧಿಕಾರಿ ರಕ್ಷಿತ್, ಸೋಮವಾರಪೇಟೆಯ ಹಿರಿಯ ಗಾಯಕರಾದ ಪೀಟರ್ ಪಾಲ್ಗೊಳ್ಳಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಅವರು ತಿಳಿಸಿದ್ದಾರೆ.