ವೀರಾಜಪೇಟೆ, ಜು. ೧೭: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ನಗರ ಪೊಲೀಸ್ ಠಾಣೆ ವತಿಯಿಂದ ವೀರಾಜಪೇಟೆ ಪಟ್ಟಣದಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ನಡೆಯಿತು. ಗುರುವಾರ ಬೆಳಗ್ಗೆ ವೀರಾಜಪೇಟೆ ಮುಖ್ಯ ರಸ್ತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬೈಕ್ ಸವಾರರನ್ನು ತಡೆದು ಹೆಲ್ಮೆಟ್ ಧರಿಸುವ ಮಹತ್ವದ ಬಗ್ಗೆ ತಿಳುವಳಿಕೆ ನೀಡಿದರು. ಹೆಲ್ಮೆಟ್ ಇಲ್ಲದೆ ಬಂದ ಸವಾರರಿಗೆ ಸ್ಥಳದಲ್ಲೇ ಹೆಲ್ಮೆಟ್ ಧರಿಸುವಂತೆ ಸೂಚಿಸಿ, ರಸ್ತೆ ನಿಯಮ ಪಾಲಿಸುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೀರಾಜಪೇಟೆ ನಗರ ಪೊಲೀಸ್ ಠಾಣಾಧಿಕಾರಿ ಹೆಚ್.ಎಸ್. ಪ್ರಮೋದ್ ಮಾತನಾಡಿ, "ಹೆಲ್ಮೆಟ್ ಧರಿಸುವುದು ಕಡ್ಡಾಯ ಮಾತ್ರವಲ್ಲ, ಅದು ನಿಮ್ಮ ಜೀವ ಉಳಿಸುವ ರಕ್ಷಾ ಕವಚ. ಸಣ್ಣ ನಿರ್ಲಕ್ಷ÷್ಯವೂ ದೊಡ್ಡ ಅಪಾಯಕ್ಕೆ ಕಾರಣವಾಗಬಹುದು. ಪ್ರತಿಯೊಬ್ಬರೂ ಸಂಚಾರಿ ನಿಯಮಗಳನ್ನು ಪಾಲಿಸಬೇಕು" ಎಂದು ಹೇಳಿದರು. ಅಪಘಾತವಾದಾಗ ತಲೆ ಪೆಟ್ಟಿನಿಂದ ಸಾವು ಸಂಭವಿಸುವ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಹೆಲ್ಮೆಟ್ ಮತ್ತು ಸೀಟ್ ಬೆಲ್ಟ್ ಬಳಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದೇ ಈ ಅಭಿಯಾನದ ಮುಖ್ಯ ಉದ್ದೇಶ ಎಂದು ಅವರು ತಿಳಿಸಿದರು.

ಪೊಲೀಸರ ಈ ಜಾಗೃತಿ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಅನೇಕ ಬೈಕ್ ಸವಾರರು ತಪ್ಪನ್ನು ಒಪ್ಪಿಕೊಂಡು ಮುಂದಿನಿAದ ನಿಯಮ ಪಾಲಿಸುವುದಾಗಿ ಭರವಸೆ ನೀಡಿದರಲ್ಲದೆ "ದಂಡ ಹಾಕುವುದಕ್ಕಿಂತ ಜಾಗೃತಿ ಮೂಡಿಸುವುದು ಮುಖ್ಯ. ಪೊಲೀಸರು ತುಂಬಾ ಸೌಜನ್ಯದಿಂದ ತಿಳಿಸಿಕೊಟ್ಟರು" ಎಂದು ಸ್ಥಳೀಯರೊಬ್ಬರು ಅಭಿಪ್ರಾಯಪಟ್ಟರು. ಈ ಸಂದರ್ಭ ಪೊಲೀಸ್ ಠಾಣಾಧಿಕಾರಿಗಳಾದ ಕಾವೇರಪ್ಪ ಹಾಗೂ ಸಿಬ್ಬಂದಿಗಳು, ಸಾರ್ವಜನಿಕರು ಹಾಜರಿದ್ದರು.