ಇಂದು ಕಾರ್ಯಾಚರಣೆ
ಕುಶಾಲನಗರ ವಲಯ ಅರಣ್ಯ ವ್ಯಾಪ್ತಿಯ ಮೀನುಕೊಲ್ಲಿ ಶಾಖೆಯ ವ್ಯಾಪ್ತಿಗೆ ಒಳಪಡುವ ನೆಲ್ಲಿಹುದಿಕೇರಿ ಬೆಟ್ಟದಕಾಡು, ಬರಡಿ, ಹಾಗೂ ನಲ್ವತ್ತೇಕರೆ. ಕಾಟಿಬಾಣೆ, ಅರೆಕಾಡು, ಅತ್ತಿಮಂಗಲ ಭಾಗದ ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ತಾ. ೧೮ ರಂದು (ಇಂದು) ಬೆಳಗ್ಗಿನಿಂದ ಸಂಜೆಯವರೆಗೂ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಈ ಭಾಗದ ಕಾಫಿ ತೋಟಗಳ ಮಾಲೀಕರು ಕಾರ್ಮಿಕರು, ಮತ್ತು ರೈತರು ಹಾಗೂ ಶಾಲಾ - ಕಾಲೇಜು ಮಕ್ಕಳು ಸಾರ್ವಜನಿಕರು ವಾಹನ ಚಾಲಕರು ಎಚ್ಚರಿಕೆವಹಿಸಿ ಕಾರ್ಯಾಚರಣೆ ಸಂದರ್ಭದಲ್ಲಿ ಅರಣ್ಯ ಇಲಾಖೆ ಯೊಂದಿಗೆ ಸಹಕರಿಸುವಂತೆ ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್ ಮನವಿ ಮಾಡಿದ್ದಾರೆ.