ಮಡಿಕೇರಿ, ಜು. ೧೭: ಜನರನ್ನು ಮನವೊಲಿಸಿ ಖಾತೆಗಳನ್ನು ತೆರೆಸಿ ಅದರ ಮೂಲಕ ಸೈಬರ್ ವಂಚನೆ ನಡೆಸುತ್ತಿದ್ದ ಆರೋಪಿಯನ್ನು ಜಿಲ್ಲಾ ಸೈಬರ್ ಕ್ರೆöÊಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೂಲತಃ ಯಸಳೂರುವಿನ ಈಚಲುಬೀಡು ನಿವಾಸಿ ಕರಣ್ ಬಂಧಿತ ಆರೋಪಿಯಾಗಿದ್ದು, ಜಿಲ್ಲೆಯ ವಿವಿಧ ಬ್ಯಾಂಕ್‌ಗಳಲ್ಲಿ ೧೦ಕ್ಕೂ ಹೆಚ್ಚು ಖಾತೆಗಳನ್ನು ಬಳಸಿ ವಂಚನೆ ನಡೆಸುತ್ತಿದ್ದ ಎಂದು ತನಿಖೆಯಿಂದ ಬಯಲಾಗಿದೆ. ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸೈಬರ್ ಪೊಲೀಸರು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅದೇ ರೀತಿ ಜಿಲ್ಲಾ ಸೈಬರ್ ಕ್ರೆöÊಂ ಪೊಲೀಸರು ಕೂಡ ಬ್ಯಾಂಕ್‌ಗಳಲ್ಲಿರುವ ನಿಷ್ಕಿçಯ ಖಾತೆಗಳನ್ನು ಪರಿಶೀಲನೆ ನಡೆಸುತ್ತಿರುವ ಸಂದರ್ಭ ಕೊಡ್ಲಿಪೇಟೆ ಹಾಗೂ ಮಡಿಕೇರಿಯ ಬ್ಯಾಂಕ್‌ಗಳಲ್ಲಿ ೧೦ಕ್ಕೂ ಹೆಚ್ಚು ಖಾತೆಗಳು ಪತ್ತೆಯಾಗಿವೆ. ಈ ಸಂಬAಧ ಖಾತೆದಾರರನ್ನು ಕರೆಸಿ ವಿಚಾರಣೆ ನಡೆಸಿದ ಸಂದರ್ಭ ವಿದ್ಯಾರ್ಥಿ ವೇತನ, ಮನೆ ಸಾಲ ಕೊಡಿಸುವುದಾಗಿ ಸೇರಿದಂತೆ ವಿವಿಧ ಕಾರಣಕ್ಕಾಗಿ ಕರಣ್ ಖಾತೆ ತೆರೆಸಿರುವುದು ಬೆಳಕಿಗೆ ಬಂದಿದೆ. ಅಲ್ಲದೆ ಖಾತೆ ತೆರೆದರೆ ರೂ. ೧೦ ಸಾವಿರದಷ್ಟು ಹಣವನ್ನು ನೀಡುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ ವಿಚಾರಣೆಗೊಳಪಡಿಸಿದ್ದು, ಈ ಖಾತೆಗಳ ಮೂಲಕ ಸುಮಾರು ರೂ. ೩೫ ಲಕ್ಷಕ್ಕೂ ಹೆಚ್ಚಿನ ವಹಿವಾಟು ನಡೆಸಿರುವುದು ಬಹಿರಂಗಗೊAಡಿದೆ. ವಂಚನೆ ನಡೆಸಿ ಅನ್ಯರ ಖಾತೆಗಳಿಗೆ ಹಣ ಸಂದಾಯ ಮಾಡಿಸಿಕೊಂಡು ಬಳಿಕ ಅದನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡು ಮತ್ತೇ ಆ ಖಾತೆಯ ಬಳಕೆಯನ್ನು ಆರೋಪಿ ಸ್ಥಗಿತಗೊಳಿಸುತ್ತಿದ್ದ. ಇದೇ ರೀತಿ ರಾಜ್ಯದ ವಿವಿಧೆಡೆಗಳಲ್ಲಿ ಖಾತೆ ತೆರೆದು ವಂಚನೆ ನಡೆದಿರುವ ಅನುಮಾನವೂ ಇದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾ ಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಮಾರ್ಗದರ್ಶನ, ಸೈಬರ್ ಕ್ರೆöÊಂ ಪೊಲೀಸ್ ಠಾಣೆ ಡಿವೈಎಸ್‌ಪಿ ಐ.ಪಿ. ಮೇದಪ್ಪ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಅಭಿಲಾಷ್, ಅಜಯ್, ಪುನೀತ್, ನಿಶಾ ಭಾಗವಹಿಸಿದ್ದರು. ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆಯನ್ನು ಬೇರೆ ಯಾರಿಗೂ ಬಳಸಲು ನೀಡಬಾರದು. ಹಾಗೇ ನೀಡಿದಲ್ಲಿ ಕಾನೂನು ಬಾಹಿರ ಕೃತ್ಯಗಳಿಗೆ ಉಪಯೋಗಿಸುವುದು ಕಂಡುಬAದಲ್ಲಿ ಖಾತೆದಾರರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ಎಸ್‌ಪಿ ಬಿಂದುಮಣಿ, ಆರೋಪಿಯನ್ನು ಪತ್ತೆಮಾಡಿದ ತನಿಖಾ ತಂಡವನ್ನು ಪ್ರಶಂಸಿಸಿದ್ದಾರೆ.