ಮಡಿಕೇರಿ, ಜು.೧೯: ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ತಾಲೂಕು ತಾಂತ್ರಿಕ ವ್ಯವಸ್ಥಾಪಕರು(ಬಿಟಿಎಂ) ೨ ಹುದ್ದೆ ಮತ್ತು ಸಹಾಯಕ ತಾಂತ್ರಿಕ ವ್ಯವಸ್ಥಾಪಕರು(ಎಟಿಎಂ) ೪ ಹುದ್ದೆಗಳನ್ನು ಒಪ್ಪಂದದ ಆಧಾರದ ಮೇಲೆ ೨೦೨೬-೨೭ನೇ ಸಾಲಿನ ಸೀಮಿತ ಅವಧಿಗೆ ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಷರತ್ತಿಗೆ ಒಳಪಟ್ಟು ಅರ್ಜಿ ಆಹ್ವಾನಿಸಲಾಗಿದೆ.

ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಎಂ ಎಸ್ಸಿ (ಕೃಷಿ /ತೋಟಗಾರಿಕೆ/ ಮೀನುಗಾರಿಗೆ/ಅರಣ್ಯ ರೇಷ್ಮೆ), ಕನಿಷ್ಟ ೨ ವರ್ಷ ಕೃಷಿ ವಿಸ್ತರಣಾ ಮತ್ತು ಸಂಬAಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂಎಸ್ ಆಫಿಸ್‌ನಲ್ಲಿ ಪರಿಣಿತಿ ಹೊಂದಿರತಕ್ಕದ್ದು. ಗರಿಷ್ಟ ೪೫ ವರ್ಷ, ಮಾಸಿಕ ೩೦ ಸಾವಿರ ರೂ. ಆಗಿದೆ.

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಬಿಎಸ್ಸಿ/ ಎಂಎಸ್ಸಿ (ಕೃಷಿ /ತೋಟಗಾರಿಕೆ/ ಮೀನುಗಾರಿಗೆ/ಅರಣ್ಯ ರೇಷ್ಮೆ) ಕನಿಷ್ಟ ೧ ವರ್ಷ ಕೃಷಿ ವಿಸ್ತರಣಾ ಮತ್ತು ಸಂಬAಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂಎಸ್ ಆಫಿಸ್‌ನಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಟ ೪೫ ವರ್ಷ, ಮಾಸಿಕ ೨೫ ಸಾವಿರ ರೂ. ಆಗಿದೆ.

ಈ ಹುದ್ದೆಗೆ ಅರ್ಹರಿರುವ ಆಭ್ಯರ್ಥಿಗಳು ಜುಲೈ, ೩೧ ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೆಎಸ್‌ಎಪ್‌ಸಿ ಕಟ್ಟಡ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಆತ್ಮ ವಿಭಾಗ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.