ಮಡಿಕೇರಿ,ಜು.೧೯: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಬೆಂಗಳೂರು ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವವರಿಗೆ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವು ತಾ. ೨೭ ರಂದು ನಗರದ ಕೊಹಿನೂರು ರಸ್ತೆಯ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿAದ ದೊರೆಯುವ ನೆರವು, ಪ್ರೋತ್ಸಾಹ, ಯೋಜನೆಗಳ ಆಯ್ಕೆ, ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ದಿ ತರಬೇತಿ ಬಗ್ಗೆ ಮಾಹಿತಿ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು.

ಆಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದೆ. ಭಾಗವಹಿಸುವವರು ಕನಿಷ್ಠ ೧೮ ವರ್ಷ ಮೇಲ್ಪಟ್ಟ ವಯಸ್ಸಿನವರಾಗಿರಬೇಕು ಹಾಗೂ ಕನಿಷ್ಠ ಹತ್ತನೇ ತರಗತಿ ವ್ಯಾಸಂಗ ಮಾಡಿರಬೇಕು. ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ದೂ.ಸಂ.೭೭೬೦೧೪೫೭೮೪, ೮೩೧೦೭೩೮೮೧೯ ನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಜಿಲ್ಲಾ ಕೈಗಾರಿಕಾ ಕೇಂದ್ರದ ಸಲಹೆಗಾರರು ತಿಳಿಸಿದ್ದಾರೆ.