ಕುಶಾಲನಗರ, ಜು. ೧೯: ಕುಶಾಲನಗರ ಸುತ್ತಮುತ್ತ ಗ್ರಾಮಾಂತರ ಪ್ರದೇಶದ ಹಿಂದು ಸಮುದಾಯದ ನಾಗರಿಕರಿಗೆ ತಪ್ಪು ಮಾಹಿತಿ ನೀಡುವ ಮೂಲಕ ಮತಾಂತರ ಮಾಡಿ ಕುಶಾಲನಗರ ಪಟ್ಟಣದಲ್ಲಿ ಬಾಡಿಗೆ ಕಟ್ಟಡ ಒಂದರಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುತ್ತಿದ್ದ ಸಂದರ್ಭ ಹಿಂದೂ ಪರ ಸಂಘಟನೆಗಳ ಪ್ರಮುಖರು ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ಕುಶಾಲನಗರದಲ್ಲಿ ನಡೆದಿದೆ.

ಕುಶಾಲನಗರದ ಗೌಡ ಸಮಾಜ ರಸ್ತೆ ಗೆ ತೆರಳುವ ರಸ್ತೆ ಪಕ್ಕ ಕಟ್ಟಡದಲ್ಲಿ ಮೂಲತಃ ಮಂಗಳೂರು ಮೂಲದ ವ್ಯಕ್ತಿಯೊಬ್ಬನ ನೇತೃತ್ವದಲ್ಲಿ ನೂರಾರು ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕುಶಾಲನಗರದ ಹಿಂದೂಪರ ಸಂಘಟನೆಗಳ ಪ್ರಮುಖರು ಅಲ್ಲಿಗೆ ತೆರಳಿದ್ದಾರೆ.

ಇದೇ ಸಂದರ್ಭ ಕುಶಾಲನಗರ ಪಟ್ಟಣ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಣ್ಣ ಮತ್ತು ಅಪರಾಧ ವಿಭಾಗದ ಗೀತಾ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಯಾವುದೇ ರೀತಿಯ ಘರ್ಷಣೆ ಆಗದಂತೆ ಸಮಸ್ಯೆ ಬಗೆಹರಿಸಿದ್ದಾರೆ. ಕೇಂದ್ರದ ಪ್ರಮುಖರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಕುಶಾಲನಗರ ಸುತ್ತಮುತ್ತ ಗ್ರಾಮಾಂತರ ಪ್ರದೇಶಗಳ ವಿವಿಧ ಸಮುದಾಯಗಳ ನೂರಾರು ಮಂದಿ ಸಾಮೂಹಿಕವಾಗಿ ಮತಾಂತರಗೊAಡು ಕಳೆದ ಎರಡು ವರ್ಷಗಳಿಂದ ಈ ಕಟ್ಟಡದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದು ಇದರಿಂದ ಸುತ್ತಮುತ್ತ ನಾಗರಿಕರಿಗೆ ಕಿರಿಕಿರಿ ಉಂಟಾಗುತ್ತಿತ್ತು ಎಂದು ಹಿಂದೂ ಪರ ಸಂಘಟನೆಗಳ ಪ್ರಮುಖರು ಆರೋಪಿಸಿದ್ದಾರೆ.

ಈ ಬಗ್ಗೆ ಕುಶಾಲನಗರ ಬಿಜೆಪಿ ಯುವ ಮೋರ್ಚಾ ಪ್ರಮುಖರಾದ ಸುಮನ್ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದು ಯಾವುದೇ ಅನುಮತಿ ಇಲ್ಲದೆ ಪಟ್ಟಣದ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ವ್ಯಾಪ್ತಿಯಲ್ಲಿ ಮತಾಂತರ ದಂಧೆಯಲ್ಲಿ ತೊಡಗಿರುವ ವ್ಯಕ್ತಿಗಳ ಬಗ್ಗೆ ವಿಚಾರಣೆ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಬಿಜೆಪಿ ತಾಲೂಕು ಪ್ರಮುಖರಾದ ಎಂ ಡಿ ಕೃಷ್ಣಪ್ಪ, ಯುವ ಮೋರ್ಚಾದ ನವನೀತ್ ಪೊನ್ನೇಟಿ, ವಿಶ್ವ ಹಿಂದೂ ಪರಿಷತ್ ಪ್ರಮುಖರಾದ ಸಂತೋಷ್, ಪ್ರಜ್ವಲ್, ಹಿಂದೂ ಜಾಗರಣಾ ವೇದಿಕೆಯ ಡಿ.ಸಿ. ಮಂಜುನಾಥ್, ರಾಜೀವ್, ಹಿಂದೂ ಸಂಘಟನೆಗಳ ಪ್ರಮುಖರಾದ ಭರತ್ ಮಾಚಯ್ಯ, ಕೂಡಿಗೆ ಹರೀಶ್, ಎಂ.ಎಸ್. ಶಿವಾನಂದ್ ಮತ್ತು ಕಾರ್ಯಕರ್ತರು ಕಟ್ಟಡ ಮುಂಭಾಗ ಸೇರಿ ತಕ್ಷಣ ಮತಾಂತರಕ್ಕೆ ಪ್ರಚೋದನೆ ನೀಡುತ್ತಿರುವ ವ್ಯಕ್ತಿಗಳ ಮೇಲೆ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಆಗ್ರಹಿಸಿದ್ದಾರೆ.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾಹಿತಿಯನ್ನು ಒದಗಿಸುವುದು. ಮತ್ತು ಬಲವಂತವಾಗಿ ಮತಾಂತರ ಮಾಡುವುದು ಇಂತಹ ಕೃತ್ಯದಲ್ಲಿ ತೊಡಗಿರುವ ಕೇಂದ್ರದ ಪ್ರಮುಖರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ದಿನೇಶ್ ಶೆಟ್ಟಿ ಮತ್ತು ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿದ್ದು ಕೂಡಲೇ ಸ್ಥಳೀಯ ಆಡಳಿತ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.