ಕೋವರ್ಕೊಲ್ಲಿ ಇಂದ್ರೇಶ್
ಬೆAಗಳೂರು, ಜು. ೧೯: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಹೋಂಸ್ಟೇಗಳೂ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಇದುವರೆಗೂ ೫೦೦ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದು, ನೋಂದಣಿ ಮಾಡಿಸದಿರುವ ಎಲ್ಲಾ ಅರ್ಹ ಹೋಂಸ್ಟೇ ಮಾಲೀಕರು ವಿಳಂಬ ಮಾಡದೆ ಶೀಘ್ರವೇ ಪ್ರವಾಸೋದ್ಯಮ ಇಲಾಖೆಯ ಮೂಲಕ ಅಧಿಕೃತವಾಗಿ ನೋಂದಾಯಿಸಿಕೊಳ್ಳುವAತೆ ಪ್ರವಾಸೋದ್ಯಮ ಇಲಾಖೆಯ ಆಯುಕ್ತರಾದ ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆ ಮಾಡಿರುವ ಆಯುಕ್ತರು ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯು ‘ಕರ್ನಾಟಕ ಹೋಂಸ್ಟೇ ನೋಂದಣಿ ಮಾರ್ಗಸೂಚಿ-೨೦೨೫’ ಜಾರಿಗೆ ತಂದಿದ್ದು, ಇದಕ್ಕೆ ರಾಜ್ಯಾದ್ಯಂತ ಉತ್ತಮ ಸ್ಪಂದನ ವ್ಯಕ್ತವಾಗುತ್ತಿದೆ. ಈವರೆಗೂ ನೋಂದಣಿ ಮಾಡಿಸದಿದ್ದ ೫೦೦ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ಅಧಿಕೃತ ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಪ್ರವಾಸಿಗರಿಗೆ ಆತಿಥ್ಯ ಒದಗಿಸುತ್ತಿರುವ ಪ್ರತಿಯೊಂದು ಹೋಂಸ್ಟೇಗೂ ನೋಂದಣಿಯನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ, ಇದುವರೆಗೂ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ನೋಂದಣಿ ಮಾಡಿಸದಿರುವ ಎಲ್ಲಾ ಅರ್ಹ ಹೋಂಸ್ಟೇ ಮಾಲೀಕರು ವಿಳಂಬ ಮಾಡದೆ ಶೀಘ್ರವೇ ಪ್ರವಾಸೋದ್ಯಮ ಇಲಾಖೆಯ ಮೂಲಕ ಅಧಿಕೃತವಾಗಿ ನೋಂದಾಯಿಸಿಕೊಳ್ಳುವAತೆ ಆಯುಕ್ತರು ಕರೆ ನೀಡಿದ್ದಾರೆ.
ಇಲಾಖೆಗೆ ಆನ್ಲೈನ್ ಮೂಲಕ ಸಲ್ಲಿಸಲಾಗಿರುವ ಅರ್ಜಿಗಳ ಪೈಕಿ ಈಗಾಗಲೇ ಸುಮಾರು ೪೦೦ ಅರ್ಜಿಗಳ ದಾಖಲಾತಿ ಪರಿಶೀಲನೆ ಪೂರ್ಣಗೊಂಡಿದ್ದು, ಪ್ರಸ್ತುತ ಸ್ಥಳ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ. ಸಲ್ಲಿಕೆಯಾಗುವ ಪ್ರತಿ ಅರ್ಜಿಯನ್ನೂ ಪ್ರವಾಸೋದ್ಯಮ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ/ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳನ್ನೊಳಗೊಂಡ ತಂಡವು ಕೂಲಂಕಷವಾಗಿ ಪರಿಶೀಲಿಸಿದ ಬಳಿಕವೇ ನೋಂದಣಿ ಪ್ರಮಾಣಪತ್ರವನ್ನು ವಿತರಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಪ್ರಮುಖವಾಗಿ ಮೂಲಸೌಕರ್ಯ, ಭದ್ರತೆ, ಸ್ವಚ್ಛತೆ ಹಾಗೂ ಕಾರ್ಯಾಚರಣೆಯ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಮೌಲ್ಯಮಾಪನ ಮಾಡಲಾಗುತ್ತಿದೆ.
ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ಕನಿಷ್ಠ ಮಾನದಂಡಗಳನ್ನು ಪೂರೈಸದ ಹೋಂಸ್ಟೇಗಳಿಗೆ ನೋಂದಣಿ ಮಾನ್ಯತೆ ನೀಡಲಾಗುವುದಿಲ್ಲ. ಅಂತÀವರು ಅಗತ್ಯ ಲೋಪಗಳನ್ನು ಸರಿಪಡಿಸಿಕೊಂಡು ಮರು-ಅರ್ಜಿ ಸಲ್ಲಿಸಬಹುದಾಗಿದೆ. ಎಲ್ಲಾ ಹಂತದ ಪರಿಶೀಲನೆಗಳು ಮುಕ್ತಾಯಗೊಂಡು, ಸಂಬAಧಪಟ್ಟ ಪ್ರಾಧಿಕಾರದಿಂದ ಅನುಮೋದನೆ ದೊರೆತ ೪೫ ದಿನಗಳ ಒಳಗಾಗಿ ನೋಂದಣಿ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ. ಈ ಪ್ರಮಾಣ ಪತ್ರವು ಐದು ವರ್ಷಗಳ ಕಾಲ ಮಾನ್ಯತೆ ಹೊಂದಲಿದ್ದು, ತದನಂತರ ನವೀಕರಿಸಿಕೊಳ್ಳುವುದು ಕಡ್ಡಾಯ ಎಂದು ಅವರು ತಿಳಿಸಿದ್ದಾರೆ.
ಈ ಕಡ್ಡಾಯ ನೋಂದಣಿ ವ್ಯವಸ್ಥೆಯಿಂದಾಗಿ ರಾಜ್ಯದಲ್ಲಿನ ನೈಜ ಹೋಂಸ್ಟೇಗಳಿಗೆ ಸರ್ಕಾರದ ಅಧಿಕೃತ ಮಾನ್ಯತೆ ದೊರೆಯಲಿದೆ. ಇದು ಪ್ರವಾಸಿಗರಿಗೆ ವಿಶ್ವಾಸಾರ್ಹ ಹಾಗೂ ಸುರಕ್ಷಿತ ವಸತಿ ವ್ಯವಸ್ಥೆಯನ್ನು ಒದಗಿಸುವುದರ ಜೊತೆಗೆ, ಇಲಾಖೆಯ ಮಟ್ಟದಲ್ಲಿ ಅಧಿಕೃತ ಡೇಟಾಬೇಸ್ ನಿರ್ವಹಿಸಲು ಸಹಕಾರಿಯಾಗಲಿದೆ. ನೋಂದಾಯಿತ ಹೋಂಸ್ಟೇಗಳು ಸರ್ಕಾರದ ಸುರಕ್ಷತಾ ಮತ್ತು ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಚಾಚೂ ತಪ್ಪದೆ ಪಾಲಿಸಬೇಕಾಗುತ್ತದೆ. ಅಲ್ಲದೆ ನೋಂದಾವಣೆ ಇಲ್ಲದೆ ಪ್ರವಾಸಿಗರಿಗೆ ಅತಿಥ್ಯ ಒದಗಿಸುತ್ತಿರುವ ಅನಧಿಕೃತ ಹೋಂ ಸ್ಟೇಗಳ ವಿರುದ್ದ ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದೂ ಡಾ. ರಾಮ್ ಪ್ರಸಾತ್ ಮನೋಹರ್ ಎಚ್ಚರಿಕೆ ನೀಡಿದ್ದಾರೆ.