ಸೋಮವಾರಪೇಟೆ, ಜು. ೧೯: ವಿದ್ಯಾರ್ಥಿ ಜೀವನದಲ್ಲಿಯೇ ಶಿಸ್ತು, ಸಂಸ್ಕಾರ ಹಾಗೂ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರ ಹಾಗೂ ಸೂಕ್ತ ತಯಾರಿ ಅತ್ಯವಶ್ಯಕ ಎಂದು ತಾಲೂಕು ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಅಭಿಪ್ರಾಯಿಸಿದರು.
ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಾಲಾ - ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಕ್ಕೆ ಚುನಾವಣೆ ನಡೆಸಿದಾಗ ಅದರ ಮೂಲಕ ಮಕ್ಕಳಿಗೆ ಪ್ರಜಾಪ್ರಭುತ್ವದ ಮಹತ್ವ ತಿಳಿಯುತ್ತದೆ ಎಂದು ಕೃಷ್ಣಮೂರ್ತಿ ಅಭಿಪ್ರಾಯಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಆಡಳಿತ ಮಂಡಳಿ ಸದಸ್ಯ ನಿವೃತ್ತ ಹೆಚ್ಚುವರಿ ವಾಣಿಜ್ಯ ಇಲಾಖೆಯ ಕಮಿಷನರ್ ಬಿ.ಎ. ನಾಣಿಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸಬೇಕು ಎಂದರು.
ಸAಸ್ಥೆಯ ಹಿಂದಿ ಉಪನ್ಯಾಸಕ ರಾಜಸುಂದರA ಪ್ರಾಸ್ತಾವಿಕವಾಗಿ ಮಾತನಾಡಿದರು. ಕಳೆದ ಬಾರಿ ಹತ್ತನೇ ತರಗತಿಯಲ್ಲಿ ಶೇ. ೧೦೦ ಫಲಿತಾಂಶ ಪಡೆದ ಪ್ರಯುಕ್ತ ಪ್ರೌಢಶಾಲಾ ಮುಖ್ಯ ಶಿಕ್ಷಕಿ ರೀಟಾ ಅವರಿಗೆ ಸಾಧನಾಸಿರಿ ಅಭಿನಂದನಾ ಪ್ರಶಸ್ತಿ ನೀಡಲಾಯಿತು.
ಆಡಳಿತ ಮಂಡಳಿಯ ಹಿರಿಯ ಸದಸ್ಯೆ ಭೋಜಮ್ಮ ಅವರು ವಿದ್ಯಾರ್ಥಿಗಳಿಗೆ ಬ್ಯಾಡ್ಜ್ ಅಳವಡಿಸಿ ಶುಭ ಕೋರಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಮಂದಪ್ಪ ವಹಿಸಿ ಮಾತನಾಡಿ, ವಿದ್ಯಾರ್ಥಿ ಸಂಘದ ಕಾರ್ಯ ಹಾಗೂ ಜವಾಬ್ದಾರಿಗಳ ವಿವರಿಸಿದರು. ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿ ಆಂಗ್ಲ ಭಾಷಾ ಉಪನ್ಯಾಸಕಿ ಪ್ರಫುಲ್ಲ ಕುಮಾರಿ ಆಯ್ಕೆಯಾದರು. ಮುಖ್ಯ ಶಿಕ್ಷಕಿ ರೀಟಾ ಸ್ವಾಗತಿಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರಕ್ಷಾ ನಿರೂಪಿಸಿ, ವಂದಿಸಿದರು.