ಮೂರ್ನಾಡು, ಜು. ೧೯: ಮಾರುತಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಶಾಲಾ ಮಂತ್ರಿಮAಡಲದ ಪ್ರಮಾಣ ವಚನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಯವರು ದೀಪ ಹಚ್ಚುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿನಿ ರಿಫಾ ಸರ್ವರನ್ನು ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ವಿದ್ಯಾರ್ಥಿನಿ ಅಫ್ರಿನ ದಿನದ ಮಹತ್ವದ ಕುರಿತು ಮಾತನಾಡಿದರು. ಬಳಿಕ ಶಾಲಾ ಚುನಾವಣೆಯ ಮೂಲಕ ಆಯ್ಕೆಯಾದ ಶಾಲಾ ಮಂತ್ರಿಮAಡಲದ ಸದಸ್ಯರಿಗೆ ತಮ್ಮ ಪದವಿ ನೀಡಿ ಗೌರವಿಸಲಾಯಿತು. ಆನಂತರ ಮಂತ್ರಿ ಮಂಡಲದ ಸದಸ್ಯರಿಗೆ ಪ್ರಮಾಣವಚನ ಬೋಧಿಸಲಾಯಿತು.

ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲೆ ಪಿ.ಟಿ. ಸುಮಿತ ಮಾತನಾಡಿದರು. ಮಾರುತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಅರುಣ್ ಅಪ್ಪಚ್ಚು ಹಿತವಚನ ನೀಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಎಂ.ಕೆ. ಅಪ್ಪಚ್ಚು ಮಾತನಾಡಿ, ಶಾಲಾ ಮಕ್ಕಳಿಗೆ ಶಿಸ್ತಿನಿಂದಿರಬೇಕು ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಸಲಹೆ ಸೂಚನೆಯನ್ನಿತ್ತರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಂದನಾರ್ಪಣೆಯನ್ನು ವಿದ್ಯಾರ್ಥಿನಿ ಜಾನವಿ ಬೋಪಣ್ಣ ನೆರವೇರಿಸಿದರು.