ಮಡಿಕೇರಿ, ಜು. ೨೦: ಕೊಡಗು ಪ್ರೆಸ್ ಕ್ಲಬ್ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ತಾಳತ್ತಮನೆಯ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ನಾಟಿ ಬಾಯ್ಸ್, ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತು.

ಹ್ಯಾAಡ್ ಬಾಲ್‌ನ ಫೈನಲ್ ಪಂದ್ಯದಲ್ಲಿ ಇಸ್ಮಾಯಿಲ್ ಕಂಡಕರೆ ನಾಯಕತ್ವದ ನಾಟಿ ಬಾಯ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಆದರ್ಶ್ ನಾಯಕತ್ವದ ಯಂಗ್ ಸ್ಪೆöÊಡರ್ಸ್ ದ್ವಿತೀಯ ಸ್ಥಾನ ಪಡೆಯಿತು. ಹಗ್ಗಜಗ್ಗಾಟ ಪಂದ್ಯದಲ್ಲಿ ಕಿಶೋರ್ ರೈ ನಾಯಕತ್ವದ ಮಡ್ ಕಮಾಂಡೋಸ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಆದರ್ಶ್ ನಾಯಕತ್ವದ ಯಂಗ್ ಸ್ಪೈಡರ್ಸ್ ದ್ವಿತೀಯ ಸ್ಥಾನ ಪಡೆಯಿತು. ಲೀಗ್ ಮಾದರಿಯಲ್ಲಿ ನಾಟಿ ಬಾಯ್ಸ್, ಯಂಗ್ ಸ್ಪೆöÊಡರ್ಸ್, ಮಡ್ ಕಮಾಂಡೋಸ್, ಮಡ್ ಫೀಲ್ಡರ್ಸ್, ಮಡ್ ಬಾಯ್ಸ್, ತಂಡಗಳು ಸೆಣಸಾಟ ನಡೆಸಿದವು.

೪೦ ವರ್ಷ ವಯಸ್ಸಿನೊಳಗಿನವರ ವಿಭಾಗದಲ್ಲಿ ನಡೆದ ಓಟದ ಸ್ಪರ್ಧೆಯಲ್ಲಿ ಇಸ್ಮಾಯಿಲ್ ಕಂಡಕರೆ (ಪ್ರ), ದಿವಾಕರ್ (ಜಾಕಿ) (ದ್ವಿ), ಸವಾದ್ ಉಸ್ಮಾನ್ ತೃತೀಯ ಸ್ಥಾನ ಪಡೆದರು. ೪೦ ವರ್ಷ ಮೇಲ್ಪಟ್ಟವರ ವಿಭಾಗದಲ್ಲಿ ಗೋಪಾಲ್ ಸೋಮಯ್ಯ (ಪ್ರ), ಚನ್ನನಾಯಕ್(ದ್ವಿ), ಚೀರಂಡ ಚಂಗಪ್ಪ ತೃತೀಯ ಸ್ಥಾನ ಪಡೆದರು.

ಕೊಡಗು ವಿದ್ಯಾಲಯದ ದೈಹಿಕ ಶಿಕ್ಷಣ ಶಿಕ್ಷಕ ದಿನೇಶ್, ರಕ್ಷಿತ್ ಕಟ್ರತನ, ದೇವಂಗೋಡಿ ಜಿತು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರೆ, ಬಾಚರಣಿಯಂಡ ಶಶಾಂಕ್ ಸೋಮಯ್ಯ, ಶ್ರುತನ್ ಸುಬ್ಬಯ್ಯ ಸ್ಕೋರರ್ ಆಗಿ ಕಾರ್ಯನಿರ್ವಹಿಸಿದರು.

ಪ್ರದರ್ಶನ ಪಂದ್ಯ

ಉದ್ಘಾಟನಾ ಕಾರ್ಯಕ್ರಮದ ನಂತರ ಪತ್ರಕರ್ತರು ಮತ್ತು ಫಾರ್ಮರ್ಸ್ ಕ್ಲಬ್ ನಡುವೆ ನಡೆದ ಹಗ್ಗಜಗ್ಗಾಟದ ಪ್ರದರ್ಶನ ಪಂದ್ಯದಲ್ಲಿ ಫಾರ್ಮರ್ಸ್ ಕ್ಲಬ್ ತಂಡ ಗೆಲುವು ಸಾಧಿಸಿತು.

ಕ್ರೀಡಾಕೂಟದಿಂದ ಪರಸ್ಪರ ಬಾಂಧವ್ಯ ವೃದ್ಧಿ

ಕ್ರೀಡಾಕೂಟಗಳು ಪರಸ್ಪರ ಬಾಂಧವ್ಯವನ್ನು ವೃದ್ಧಿಸುತ್ತವೆ ಎಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್.ಸವಿತಾ ರೈ ಹೇಳಿದರು.

ತಾಳತ್ತಮನೆಯ ಮಲ್ಲನ ಬೆಳ್ಯಪ್ಪ ಅವರ ಗದ್ದೆಯಲ್ಲಿ ಜಿಲ್ಲಾ ಮಟ್ಟದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸುದ್ದಿಯ ಜಂಜಾಟದ ನಡುವೆ ಪತ್ರಕರ್ತರ ಜೀವನ ಸದಾ ಒತ್ತಡದಿಂದ ಕೂಡಿರುತ್ತದೆ. ಇಂತಹ ಕ್ರೀಡಾಕೂಟಗಳು ಪರಸ್ಪರ ಬಾಂಧವ್ಯವನ್ನು ಮತ್ತಷ್ಟು ವೃದ್ಧಿಸುತ್ತವೆ. ಆಟವಾಡುವಾಗ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ತಾಳತ್ತಮನೆ ಫಾರ್ಮರ್ಸ್ ಕ್ಲಬ್ ಅಧ್ಯಕ್ಷ ಜನನ್ ಪೊನ್ನೆಟ್ಟಿ ಮಾತನಾಡಿ, ತಾಳತ್ತಮನೆಯಲ್ಲಿ ಈ ಕ್ರೀಡಾಕೂಟ ನಡೆಸುತ್ತಿರುವುದು ನಮಗೆ ಹೆಮ್ಮೆಯ ವಿಷಯ ಎಂದು ಹೇಳಿದರು.

ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಮಳೆಯ ನಡುವೆಯೂ ಕೆಸರುಗದ್ದೆ ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಆಯೋಜಿಸಲು ಫಾರ್ಮರ್ಸ್ ಕ್ಲಬ್‌ನ ಸಹಕಾರದಿಂದ ಸಾಧ್ಯವಾಗಿದೆ ಎಂದರು.

ಕೊಡಗು ವಿದ್ಯಾಲಯದ ದೈಹಿಕ ಶಿಕ್ಷಕ ಹಾಗೂ ತೀರ್ಪುಗಾರರಾದ ದಿನೇಶ್ ಮಾತನಾಡಿ, ಆಟದಲ್ಲಿ ಕ್ರೀಡಾಸ್ಫೂರ್ತಿ ಇರಬೇಕು. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು. ಅಂಪೈರ್‌ಗಳ ತೀರ್ಪನ್ನು ಎಲ್ಲರೂ ಗೌರವಿಸಬೇಕು. ಅಂಪೈರ್ ಮತ್ತು ಕ್ರೀಡಾಪಟುಗಳ ನಡುವೆ ಉತ್ತಮ ಹೊಂದಾಣಿಕೆ ಇದ್ದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದರು.

ಸಮಾಜ ಸೇವಕ ಹಾಗೂ ಬೆಳೆಗಾರರಾದ ಮಲ್ಲನ ಆನಂದ್ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಅನು ಕಾರ್ಯಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ವಿಶಾಲ್ ಮಾರ್ಟ್ ವ್ಯವಸ್ಥಾಪಕ ಕೆ.ಕೆ.ಗಿರೀಶ್, ಬೆಳೆಗಾರ ಚೆರಿಯಮನೆ ಪ್ರಸಾದ್, ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್, ಕ್ರೀಡಾ ಸಂಚಾಲಕ ಸಂತೋಷ್ ರೈ, ಸ್ಲಾö್ಯನ್ಲಿ ಡೇವಿಡ್ ಉಪಸ್ಥಿತರಿದ್ದರು. ಕೊಡಗು ಪ್ರೆಸ್ ಕ್ಲಬ್‌ನ ನಿದೇರ್ಶಕ ಸಿಂಗಿ ಸತೀಶ್ ಪ್ರಾರ್ಥಿಸಿದರೆ, ಸದಸ್ಯ ಚಂದ್ರಮೋಹನ್ ಸ್ವಾಗತಿಸಿದರು. ಕೊಡಗು ಪ್ರೆಸ್ ಕ್ಲಬ್‌ನ ಸದಸ್ಯ ಕಿಶೋರ್ ರೈ ನಿರೂಪಿಸಿ, ಕೊಡಗು ಪ್ರೆಸ್ ಕ್ಲಬ್ ಖಜಾಂಚಿ ಆರ್.ಆರ್.ಮುನೋಜ್ ವಂದಿಸಿದರು.