ಭಾಗಮಂಡಲ, ಜು. ೨೦: ನಾಪೋಕ್ಲು- ಭಾಗಮಂಡಲ ರಸ್ತೆ ಹಾಗೂ ಭಾಗಮಂಡಲ - ಕರಿಕೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ರಸ್ತೆ ದುರಸ್ತಿ ಕಾರ್ಯವನ್ನು ಕೂಡಲೇ ಆರಂಭಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿ ಭಾಗಮಂಡಲ ಬಿಜೆಪಿ ಶಕ್ತಿ ಕೇಂದ್ರದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗಮಂಡಲ-ನಾಪೋಕ್ಲು ರಸ್ತೆ ಜಂಕ್ಷನ್ ಮತ್ತು ಕರಿಕೆ ರಸ್ತೆ ಜಂಕ್ಷನ್‌ನಲ್ಲಿ ಏಕ ಕಾಲದಲ್ಲಿ ಪ್ರತಿಭಟನೆ ನಡೆಸಿದರು. ರಸ್ತೆ ಗುಂಡಿಗಳಲ್ಲಿ ಬಾಳೆ ಗಿಡಗಳನ್ನು ನೆಟ್ಟು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಭಾಗಮಂಡಲ -ನಾಪೋಕ್ಲು ರಸ್ತೆಯಲ್ಲಿ ಹೊಂಡಗಳಾಗಿದ್ದು ವಾಹನ ಸಂಚಾರ ದುಸ್ತರವಾಗಿದೆ. ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಕೆಸರು ನೀರು ತುಂಬಿಕೊAಡು ವಾಹನ ಚಾಲಕರು ವಾಹನ ಚಲಾಯಿಸುವುದು ಕಷ್ಟಕರವಾಗಿದೆ. ಸಾರ್ವಜನಿಕರಿಗೂ ಸಮಸ್ಯೆಗಳಾಗುತ್ತಿವೆ . ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲು ಸರ್ಕಾರ ಮೀನ ಮೇಷ ಎಣಿಸುತ್ತಿದೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಎಂದು ಆಕ್ರೋಶ ವ್ಯಕ್ತಪಡಿಸಿರುವ ಶಕ್ತಿ ಕೇಂದ್ರದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಭಾಗಮಂಡಲ ಮೇಲ್ ಸೇತುವೆ ದುರಸ್ತಿ ಕಾರ್ಯವನ್ನು ಶೀಘ್ರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಭಾಗಮಂಡಲ ಅಯ್ಯಂಗೇರಿ ಹಾಗೂ ಚೆಟ್ಟಿಮಾನಿ ಭಾಗದ ಸಾರ್ವಜನಿಕರು ಹಲವು ಬಾರಿ ಕಾವೇರಿ ನೀರಾವರಿ ನಿಗಮಕ್ಕೆ ಮತ್ತು ಲೋಕೋಪಯೋಗಿ ಇಲಾಖೆಗೆ ರಸ್ತೆ ದುರಸ್ತಿ ಪಡಿಸುವಂತೆ ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಮನವಿ ಮಾಡಿದರೂ ಪ್ರಯೋಜನವಾಗಿಲ್ಲ; ಎಲ್ಲಾ ಇಲಾಖೆಗಳಿಗೆ ಲಿಖಿತ ಮನವಿ ಸಲ್ಲಿಸಲಾಗಿದೆ. ಅದೆಷ್ಟೇ ಬಾರಿ ಮನವಿ ಮಾಡಿದರೂ ಸಮಸ್ಯೆಗೆ ಪರಿಹಾರ ದೊರಕಿಲ್ಲ.ಭಾಗಮಂಡಲ -ಕರಿಕೆ ರಸ್ತೆ ಮತ್ತು ಭಾಗಮಂಡಲ ನಾಪೋಕ್ಲು ರಸ್ತೆಯಲ್ಲಿ ವಾಹನಗಳು ಸಂಚರಿಸಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ .ಅಲ್ಲದೆ ಭಾಗಮಂಡಲ ಮೇಲ್ ಸೇತುವೆ ರಸ್ತೆಯಲ್ಲಿ ಮೊಣಕಾಲುವರೆಗೆ ನೀರು ನಿಲ್ಲುವ ಪರಿಸ್ಥಿತಿ ಉಂಟಾಗಿದೆ .ಮೇಲ್ ಸೇತುವೆಯಿಂದ ಬೀಳುವಂತಹ ನೀರು ಚರಂಡಿಗೆ ಹೋಗದೆ ಜನರ ಮತ್ತು ವಾಹನಗಳ ಮೇಲೆ ನೇರವಾಗಿ ಬೀಳುತ್ತಿದ್ದು ತಕ್ಷಣ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಬೇಕಾಗಿದೆ. ಉದ್ಘಾಟನಾ ಸಂದರ್ಭದಲ್ಲಿ ಮಾಡಿದ ನಾಮಫಲಕ ಬಿದ್ದು ಹೋಗಿದೆ.ಭಾಗಮಂಡಲ ವ್ಯಾಪ್ತಿಯ ಈ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಉಮೇಶ್ ಪ್ರತಿಕ್ರಿಯಿಸಿ ತಲಕಾವೇರಿ- ಹುಣಸೂರು ರಸ್ತೆ ಕಾಮಗಾರಿ ಗುತ್ತಿಗೆದಾರರ ಪರಿಶೀಲನೆಯಲ್ಲಿದೆ. ಈಗಾಗಲೇ ಟೆಂಡರ್ ಕರೆಯಲಾಗಿದ್ದು ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಮಳೆಗಾಲ ಕಳೆದ ಬಳಿಕ ಅಯ್ಯಂಗೇರಿ -ಭಾಗಮಂಡಲ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು. ತಣ್ಣಿಮಾನಿ - ಕರಿಕೆ ರಸ್ತೆಯನ್ನು ಶೀಘ್ರ ದುರಸ್ತಿ ಪಡಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಯಿತು.
ಬೆಳಿಗ್ಗೆ ೧೦.೩೦ ಗಂಟೆಯಿAದ ೧೨ ಗಂಟೆವರೆಗೆ ನಾಪೋಕ್ಲು- ಭಾಗಮಂಡಲ, ಮಡಿಕೇರಿ -ಭಾಗಮಂಡಲ ರಸ್ತೆಯ ಸಂಪರ್ಕಕ್ಕೆ ತಡೆಯೊಡ್ಡಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಸಂದರ್ಭ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಶಕ್ತಿ ಕೇಂದ್ರದ ಅಧ್ಯಕ್ಷ ಕುದುಪಜೆ ಕುಲದೀಪ್ , ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕಾಳನ ರವಿ, ಪ್ರಮುಖರಾದ ಸಿರಕಜೆ ನಾಗೇಶ್, ಅಮೆ ಹರೀಶ್ , ನಿಡ್ಯಮಲೆ ಚಲನ್, ಅಯ್ಯಂಗೇರಿಯ ಜೀವನ್, ಅಯ್ಯಂಗೇರಿ ಮತ್ತು ಭಾಗಮಂಡಲ ಶಕ್ತಿ ಕೇಂದ್ರದ ಪದಾಧಿಕಾರಿಗಳು, ಗ್ರಾಮಸ್ಥರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಂತೆದಿನವಾದ ಸೋಮವಾರ ನಡೆಸಿದ ಪ್ರತಿಭಟನೆಯಿಂದಾಗಿ ಸಂತೆಗೆ ಆಗಮಿಸಿದ ನಾಗರಿಕರು ವಾಹನ ಸೌಕರ್ಯವಿಲ್ಲದೆ ನಡೆದುಕೊಂಡು ಹೋಗುವಂತಾಯಿತು. ಕ್ಷೇತ್ರಕ್ಕೆ ಆಗಮಿಸಿದ ಯಾತ್ರಾರ್ಥಿಗಳು ಸಮಸ್ಯೆ ಅನುಭವಿಸಿದರು.
-ಸುನಿಲ್ ಕುಯ್ಯಮುಡಿ