ಮಡಿಕೇರಿ, ಜು. ೨೦: ಬಿಳಿಗೇರಿಯ ಪ್ಲಾಂಟರ್ಸ್ ಕ್ಲಬ್ ವತಿಯಿಂದ ೬ನೇ ವರ್ಷದ ಹಿಂದೂ ಕೆಸರುಗದ್ದೆ ಕ್ರೀಡಾಕೂಟವನ್ನು ತುಂತಜ್ಜೆ ಕುಟುಂಬಸ್ಥರ ಗದ್ದೆಯಲ್ಲಿ ಆಯೋಜಿಸಲಾಗಿತ್ತು.

ಈ ಕ್ರೀಡಾಕೂಟದಲ್ಲಿ ಕ್ರಿಕೆಟ್, ವಾಲಿಬಾಲ್, ಓಟದ ಸ್ಪರ್ಧೆ, ಹಗ್ಗಜಗ್ಗಾಟ ಮತ್ತು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಗಳು ನಡೆದವು. ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ ಪ್ಲಾಂಟರ್ಸ್ ಕ್ಲಬ್‌ನ ಪದಾಧಿಕಾರಿಗಳು ಭಾಗವಹಿಸಿದ್ದರು.

ಕಾರ್ಯಕ್ರಮದ ಅಂಗವಾಗಿ ರಾಷ್ಟçಮಟ್ಟದ ಖ್ಯಾತ ಹಾಕಿ ಪಟು ಹಾಗೂ ವೀಕ್ಷಕ ವಿವರಣೆಗಾರರಾದ ಚೆಪ್ಪುಡಿರ ಕಾರ್ಯಪ್ಪ ಅವರನ್ನು ಅವರ ಕ್ರೀಡಾ ಸಾಧನೆಗಾಗಿ ಸನ್ಮಾನಿಸಿ ಗೌರವಿಸಲಾಯಿತು.