ವೀರಾಜಪೇಟೆ, ಜು. ೨೧: ವಿ. ಬಾಡಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮ ಶನಿವಾರ ಕಾರ್ಯಕ್ರಮದ ಅಂಗವಾಗಿ ‘ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ ಮತ್ತು ನಿರ್ವಹಣೆ’ ಎಂಬ ವಿಷಯದ ಕುರಿತು ವಿದ್ಯಾರ್ಥಿಗಳಿಂದ ವಿಶೇಷ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಭಾಗವಾಗಿ ಶಾಲಾ ವಿದ್ಯಾರ್ಥಿಗಳು ಮಾದಕ ವಸ್ತುಗಳ ಬಳಕೆಯ ವಿರುದ್ಧ ವಿವಿಧ ಜಾಗೃತಿ ಘೋಷಣೆಗಳನ್ನು ಕೂಗಿದರು. ತಂಬಾಕು, ಡ್ರಗ್ಸ್ನಂತಹ ವ್ಯಸನಗಳಿಂದ ದೂರವಿರುವಂತೆ ಸಾರುವ ಆಕರ್ಷಕ ಚಿತ್ರಕಲಾ ಸ್ಪರ್ಧೆಯನ್ನು ಸಹ ಮಕ್ಕಳಿಗಾಗಿ ಆಯೋಜಿಸಲಾಗಿತ್ತು. ಮಾದಕ ವಸ್ತುಗಳ ಪಿಡುಗನ್ನು ಸಮಾಜದಿಂದ ಸಂಪೂರ್ಣವಾಗಿ ತೊಡೆದು ಹಾಕಲು ನಾವೆಲ್ಲರೂ ಬಾಲ್ಯದ ದಿನಗಳಿಂದಲೇ ಜಾಗೃತರಾಗಬೇಕು ಮತ್ತು ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮಕ್ಕಳಿಗೆ ಶಿಕ್ಷಕರು ಮಾರ್ಗದರ್ಶನ ನೀಡಿದರು. ಈ ಸಂದರ್ಭ ಶಾಲಾ ಪ್ರಬಾರ ಮುಖ್ಯ ಶಿಕ್ಷಕಿ ಗೀತಾಂಜಲಿ, ಸಹ ಶಿಕ್ಷಕಿ ಕಾವೇರಮ್ಮ, ಅತಿಥಿ ಶಿಕ್ಷಕರಾದ ಕಮಲಾಕ್ಷಿ ಮತ್ತು ಮಲ್ಲಾಜಿ ಉಪಸ್ಥಿತರಿದ್ದರು.