ಮಡಿಕೇರಿ, ಜು. ೨೧ : ಸಮಾಜದಲ್ಲಿ ಸಾಮಾಜಿಕ ಹಾಗೂ ಸಾಂಸ್ಕೃತಿಕವಾದ ಬದಲಾವಣೆಗಳು ಕೊಡವಾಮೆಯನ್ನು ಲೀನಗೊಳಿಸುವುದರ ವಿರುದ್ಧ ಕೊಡವ ಹಾಗೂ ಕೊಡವ ಭಾಷಿಕರ ಸಂಘಟಿತವಾದ ನಡೆಯಿಂದ ಕೊಡವಾಮೆಯನ್ನು ಉಳಿಸಲು ಸಾಧ್ಯವೆಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಹೇಳಿದರು.

ಬೈರಂಬಾಡದ ಹಾಲುಗುಂದ ಫಾರ್ಮರ್ಸ್ ಫ್ಯಾಮಿಲಿ ಕ್ಲಬ್‌ನಲ್ಲಿ ನಡೆದ ೧೩ನೇ ಕೊಡವ ಪುಸ್ತಕ ಪತ್ತಾಯ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೊಡವ ಭಾಷೆ, ಸಾಹಿತ್ಯ, ಸಂಸ್ಕೃತಿ, ಜಾನಪದ ಕಲೆಗಳ ಪಾರಂಪರ್ಯವನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು ಸಂಘಟಿತರಾಗಿ ಮುನ್ನಡೆಯಬೇಕಿದೆ ಎಂದರು.

ಕ್ಲಬ್ ಸಂಸ್ಕೃತಿಯಿAದ ಪುಸ್ತಕ ಸಂಸ್ಕೃತಿಯೆಡೆಗೆ ಪ್ರತಿಯೊಬ್ಬರೂ ಮುಖ ಮಾಡಿದಾಗ ಮಾತ್ರ ಅನಾದಿಕಾಲದಿಂದ ಬಳುವಳಿಯಾಗಿ ಬಂದಿರುವ ಬಾಳೋಪಾಟ್, ಪುತ್ತರಿಪಾಟ್, ಮಂಗಲಪಾಟ್‌ನAತಹ ಜನಪದ ಹಾಡುಗಳಿಗೆ ಮತ್ತಷ್ಟು ಜೀವ ತುಂಬಿದAತಾಗುತ್ತದೆ. ಪ್ರತಿಯೊಂದು ಸಂಘ-ಸAಸ್ಥೆ, ಸಮಾಜ, ಕ್ಲಬ್, ಅಸೋಸಿಯೇಷನ್‌ಗಳು ಕೊಡವ ಪದ್ಧತಿ, ಸಂಸ್ಕೃತಿಯನ್ನು ಕಲಿಸುವ ಕೇಂದ್ರಗಳಾಗಬೇಕೆAಬ ಉದ್ದೇಶದಿಂದ ಕೊಡವ ಪುಸ್ತಕ ಪತ್ತಾಯದಂತಹ ಯೋಜನೆಯನ್ನು ಜಾರಿಗೆ ತಂದಿರುವುದಾಗಿ ಹೇಳಿದರು.

ಪುಸ್ತಕ ಪತ್ತಾಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಫಾರ್ಮರ್ಸ್ ಫ್ಯಾಮಿಲಿ ಕ್ಲಬ್ ಅಧ್ಯಕ್ಷ ಪಂದಿಕAಡ ದಿನೇಶ್ ಕುಶ, ಹಾಲುಗುಂದ ಗ್ರಾಮವು ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು ಇಲ್ಲಿ ಹಲವು ಕೊಡವ ಭಾಷಿಕರು ಅನ್ಯೊನ್ಯತೆಯಿಂದ ಜೀವಿಸುತ್ತಿದ್ದು ಕಷ್ಟ-ಸುಖದಲ್ಲಿ ಪಾಲ್ಗೊಳ್ಳುವಂತಾಗಲು ಫ್ಯಾಮಿಲಿ ಕ್ಲಬ್ ಸ್ಥಾಪಿಸಲಾಗಿದೆ ಎಂದರು.

ಪುಸ್ತಕ ಪತ್ತಾಯನ್ನು ಅನಾವರಣಗೊಳಿಸಿ ಮಾತನಾಡಿದ ಊರುತಕ್ಕರು ಹಾಗೂ ಹಿರಿಯರಾದ ಮೆಕೇರಿರ ರಘು ನಾಣಯ್ಯ, ಹಾಲುಗುಂದ ಗ್ರಾಮದಲ್ಲಿ ಕೊಡವ ಸಾಹಿತ್ಯ ಅಕಾಡೆಮಿಯ ವತಿಯಿಂದ ಪುಸ್ತಕ ಪತ್ತಾಯ ತೆರೆದಿರುವುದು ಅತ್ಯಂತ ಹೆಮ್ಮೆಯ ವಿಚಾರವಾಗಿದ್ದು, ಮುಂದಿನ ದಿನಗಳಲ್ಲಿ ಅಕಾಡೆಮಿ ವತಿಯಿಂದ ಮತ್ತಷ್ಟು ಪ್ರಯೋಜನಕಾರಿ ಕಾರ್ಯಗಳು ನಡೆಯುವಂತಾಗಲಿ ಎಂದು ಆಶಿಸಿದರು.

ಈ ವೇಳೆ ಅಧ್ಯಕ್ಷ ಮಹೇಶ್ ನಾಚಯ್ಯ ಫ್ಯಾಮಿಲಿ ಕ್ಲಬ್ ಅಧ್ಯಕ್ಷ ದಿನೇಶ್ ಕುಶ ಅವರಿಗೆ ಅಕಾಡೆಮಿ ವತಿಯಿಂದ ಪುಸ್ತಕ ಪತ್ತಾಯದ ನೋಂದಣಿ ಪತ್ರವನ್ನು ಹಸ್ತಾಂತರಿಸಿದರು. ಕ್ಲಬ್ ವತಿಯಿಂದ ಪುಸ್ತಕ ಪತ್ತಾಯ ನೋಂದಣಿ ಶುಲ್ಕವಾಗಿ ಹತ್ತು ಸಾವಿರ ರೂಪಾಯಿಗಳ ಚೆಕ್ಕನ್ನು ಅಕಾಡೆಮಿಗೆ ನೀಡಲಾಯಿತು.

ಪಂದಿಕAಡ ಪ್ರಿಯಾ ಸೋಮಣ್ಣ ಪ್ರಾರ್ಥಿಸಿದರು. ಅಕಾಡೆಮಿ ಸದಸ್ಯ ನಾಪಂಡ ಸಿ. ಗಣೇಶ ಸ್ವಾಗತಿಸಿದರು. ಮಚ್ಚೇಟಿರ ಅರುಣ್ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಕಾಡೆಮಿ ಸದಸ್ಯರಾದ ಪಾನಿಕುಟ್ಟಿರ ಕೆ. ಕುಟ್ಟಪ್ಪ, ಕಂಬೆಯAಡ ಡೀನ ಬೋಜಣ್ಣ, ನಾಯಂದಿರ ಆರ್. ಶಿವಾಜಿ, ಚೊಟ್ಟೆಯಂಡ ಸಂಜು ಕಾವೇರಪ್ಪ, ಪೊನ್ನಿರ ಗಗನ್ ಹಾಗೂ ಫ್ಯಾಮಿಲಿ ಕ್ಲಬ್ ಕಾರ್ಯಾಧ್ಯಕ್ಷ ಚೆಯ್ಯಂಡ ಭರತ್, ಉಪಾಧ್ಯಕ್ಷ ಅಪ್ಪಾರಂಡ ಸುಧೀರ್, ಕಾರ್ಯದರ್ಶಿ ಪೊಟ್ಟಂಡ ನಾಣಯ್ಯ ಹಾಗೂ ನಿರ್ದೇಶಕರು, ಸದಸ್ಯರು ಪಾಲ್ಗೊಂಡಿದ್ದರು.