ಐಗೂರು, ಜು. ೨೧: ಕಾಜೂರು ಸರಕಾರಿ ಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಹಾಗೂ ತಡೆಗಟ್ಟುವಿಕೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಮುಖ್ಯ ಶಿಕ್ಷಕಿ ಸರಳಕುಮಾರಿ ಮಾತನಾಡಿ ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದರು. ಶಿಕ್ಷಕಿ ಅನಸೂಯ ಮಾತನಾಡಿ ಮನೆಯಲ್ಲಿ ಹಿರಿಯರು ಮಾದಕ ವಸ್ತುಗಳನ್ನು ಬಳಸುತ್ತಿದ್ದರೆ ವಿದ್ಯಾರ್ಥಿಗಳು ಹಿರಿಯರಿಗೆ ಅದರ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕೆಂದರು. ಈ ಸಂದರ್ಭ ೧೪ ವಿದ್ಯಾರ್ಥಿಗಳು ಸೇರಿ ಮಾದಕ ವ್ಯಸನದ ದುಷ್ಪರಿಣಾಮಗಳನ್ನು ಬಿಂಬಿಸುವ ಕಿರು ನಾಟಕವನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳು, ಅಧ್ಯಾಪಕ ವೃಂದದವರು ಮಾದಕ ವಸ್ತುಗಳನ್ನು ಸೇವಿಸುವುದಿಲ್ಲ ಹಾಗೂ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸಿದರು. ಶಿಕ್ಷಕ ಸತೀಶ್ ಕುಮಾರ್ ಸ್ವಾಗತಿಸಿ ವಂದಿಸಿದರು.