ಸೋಮವಾರಪೇಟೆ, ಜು. ೨೧: ಕೃತಕ ಬುದ್ದಿಮತ್ತೆಯ ಬಳಕೆಯಿಂದ ಮಕ್ಕಳು ತಮ್ಮ ಕಲಿಕಾ ಮಟ್ಟವನ್ನು ಸುಧಾರಿಸಿಕೊಳ್ಳುವುದರೊಂದಿಗೆ ತಮ್ಮ ವೃತ್ತಿ ಬದುಕನ್ನು ಉತ್ತಮವಾಗಿ ರೂಪಿಸಿಕೊಳ್ಳಲು ನೆರವಾಗುತ್ತದೆ ಎಂದು ಉದ್ಯಮಿ ಗಿರೀಶ್ ಮಲ್ಲಪ್ಪ ಅಭಿಪ್ರಾಯಿಸಿದರು.

ತಾಲೂಕಿನ ನೇರುಗಳಲೆ ಸರಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿ ತಾನು ಕಲಿತ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸತ್ಪçಜೆಗಳಾಗಬೇಕೆಂಬ ಉದ್ದೇಶದಿಂದ ೫ ಲಕ್ಷ ರೂ. ವೆಚ್ಚದಲ್ಲಿ ಎಐಗೆ ಸಂಬAಧಿಸಿದ ಮೊಬೈಲ್ ಹಾಗೂ ವೆಬ್ ಆ್ಯಪ್‌ನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಶಾಲಾ ಮಕ್ಕಳು ಇನ್ನು ಮುಂದೆ ಎಐ ಮೂಲಕ ಗುಣಾತ್ಮಕ ಶಿಕ್ಷಣವನ್ನು ಪಡೆಯಬೇಕೆಂದು ಆಶಿಸಿದ ಅವರು ವಿದ್ಯಾರ್ಥಿಗಳು ಪ್ರತಿ ವಿಷಯದ ಸಾಕಷ್ಟು ಅಂಶಗಳನ್ನು ಕಲಿಯಲು ಅವಕಾಶವಿದ್ದು ಪ್ರತಿಯೋರ್ವ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದರು.

ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ಕೆ.ಆರ್.ರತ್ನಕುಮಾರ್ ಮಾತನಾಡಿ, ಶಿಕ್ಷಕರು ಕೂಡ ಎಲ್‌ಬಿಎ ಹಾಗೂ ಘಟಕ ಪರೀಕ್ಷೆಗಳನ್ನು ಕ್ಷಣಾರ್ಧದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿ ಅಲ್ಲೇ ಮೌಲ್ಯಮಾಪನ ಮಾಡಲು ಸಹಕಾರಿಯಾಗಿದೆ ಎಂದರು.

ಇದೇ ಸಂದರ್ಭ ದಾನಿಗಳಾದ ಗಿರೀಶ್ ಮಲ್ಲಪ್ಪ,ಅಭಿಯಂತರ ಸೈಜನ್.ಕೆ.ಪೀಟರ್, ಗ್ರಾಮದ ಪ್ರಮುಖರಾದ ಕೆ.ಎನ್.ಪಾಪಯ್ಯ ಅವರನ್ನು ಸನ್ಮಾನಿಸಲಾಯಿತು. ಆ್ಯಪ್‌ನ ಬಳಕೆ ಹಾಗೂ ಕಾರ್ಯನಿರ್ವಹಣೆ ಕುರಿತು ಉಪೇಂದ್ರ ಕುಮಾರ್ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ.ಡಿಸಿಲ್ವಾ, ಅಂಕುರA ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷ ಬೋಜೇಗೌಡ,ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ,ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಉಪಸ್ಥಿತರಿದ್ದರು.