ಮಡಿಕೇರಿ, ಜು. ೨೧: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಜಿಲ್ಲೆಯಲ್ಲಿ ನಡೆಯುತ್ತಿದ್ದು, ಈಗಾಗಲೇ ಶೇ. ೧೦೦ ರಷ್ಟು ಗಣತಿ ನಮೂನೆ ವಿತರಿಸಲಾಗಿದೆ. ಆ ದಿಸೆಯಲ್ಲಿ ಗಣತಿ ನಮೂನೆ ಡಿಜಿಟಲೀಕರಣ ಕಾರ್ಯವು ನಡೆಯುತ್ತಿದ್ದು, ಇದರಲ್ಲೂ ಸಹ ಶೇ. ೧೦೦ ರಷ್ಟು ಪ್ರಗತಿ ಸಾಧಿಸಲು ಎಲ್ಲರೂ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮನವಿ ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧಿಸಿದAತೆ ಚುನಾವಣಾ ಆಯೋಗವು ಆಗಸ್ಟ್ ೮ ರವರೆಗೂ ಕಾಲಾವಕಾಶ ನೀಡಿದೆ. ಈ ದಿಸೆಯಲ್ಲಿ ಈ ಅವಕಾಶವನ್ನು ಅರ್ಹ ಮತದಾರರು ಬಳಸಿಕೊಳ್ಳುವಂತಾಗಬೇಕು. ಯಾರೂ ಸಹ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಿಂದ ಬಿಟ್ಟುಹೋಗದಂತೆ ಎಚ್ಚರವಹಿಸಬೇಕು ಎಂದರು.
ಗಣತಿ ನಮೂನೆ ವಿತರಣಾ ಕಾರ್ಯವು ಈಗಾಗಲೇ ಪೂರ್ಣಗೊಂಡಿದ್ದು, ನಮೂನೆ ಪಡೆಯುವುದು ಬಿಟ್ಟುಹೋಗಿದ್ದಲ್ಲಿ ಪಡೆಯುವಂತಾಗಬೇಕು ಮತ್ತು ಬಿಎಲ್‌ಓಗಳು ಮಾಹಿತಿ ನೀಡಿ ಸಂಪೂರ್ಣ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಮಡಿಕೇರಿ ಮತ್ತು ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ೫೫೨ ಮತಗಟ್ಟೆಗಳಿದ್ದು, ಬೂತ್‌ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಗಣತಿ ನಮೂನೆಯನ್ನು ಮತದಾರರಿಗೆ ವಿತರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳ ಪ್ರಮುಖರು ಸಹ ಗಮನಿಸಬೇಕು. ನಂತರ ಮತದಾರರಿಂದ ಭರ್ತಿ ಮಾಡಿದ ಗಣತಿ ನಮೂನೆ ಸಂಗ್ರಹಣೆ ಮಾಡಿ ಬಿಎಲ್‌ಓ ಆ್ಯಪ್‌ನಲ್ಲಿ ಡಿಜಿಟಲೀಕರಣ ಮಾಡಲಿದ್ದಾರೆ.
ಯಾವುದಾದರೂ ವ್ಯತ್ಯಾಸಗಳಿದ್ದಲ್ಲಿ ಮಾಹಿತಿ ನೀಡುವಂತಾಗಬೇಕು. ಇದರಿಂದ ಸರಿಪಡಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಜಿಲ್ಲೆಯಲ್ಲಿ ಎರಡು ವಿಧಾನಸಭಾ ಕ್ಷೇತ್ರದಿಂದ ೪,೬೮,೬೫೭ ಮತದಾರರು ಇದ್ದು, ಈಗಾಗಲೇ ಎಲ್ಲಾ ಮತದಾರರಿಗೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಗಣತಿ ನಮೂನೆಯನ್ನು ವಿತರಿಸಲಾಗಿದೆ. ಈಗಾಗಲೇ ೩,೦೪,೮೦೫ ಮತದಾರರ ಗಣತಿ ನಮೂನೆ ಡಿಜಿಟಲೀಕರಣವಾಗಿ ಶೇ. ೬೫.೬೫ ರಷ್ಟು ಪ್ರಗತಿ ಸಾಧಿಸಲಾಗಿದೆ. ಉಳಿದಂತೆ ಪ್ರಗತಿ ಸಾಧಿಸಲು ರಾಜಕೀಯ ಪಕ್ಷಗಳ ಪ್ರಮುಖರು ಸಹಕರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಮನವಿ ಮಾಡಿದರು.
ಒಟ್ಟಾರೆ ಯಾರೂ ಸಹ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯದಿಂದ ಬಿಟ್ಟು ಹೋಗದಂತೆ ಎಚ್ಚರವಹಿಸುವುದು ಅತ್ಯಗತ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ಮತದಾರರು ತಾವು ಮತ ಹಕ್ಕು ಚಲಾಯಿಸುವ ಮತಗಟ್ಟೆ ಕೇಂದ್ರಕ್ಕೆ ಭೇಟಿ ನೀಡಿ ಬಿಎಲ್‌ಓ ಅವರಿಂದ ಮಾಹಿತಿ ಪಡೆದು, ಎಸ್‌ಐಆರ್ ಪ್ರಕ್ರಿಯೆಗೆ ಅಗತ್ಯ ಸಹಕಾರ ನೀಡುವುದು ಅತ್ಯಗತ್ಯ.
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಸಂಬAಧಿಸಿದAತೆ ೨೦೦೨ರ ಮತದಾರರ ಮತಗಟ್ಟೆಯ ಭಾಗ ಸಂಖ್ಯೆ ಮತ್ತಿತರ ಮಾಹಿತಿ ಬಗ್ಗೆ ಗೊಂದಲ ಮಾಡಿಕೊಳ್ಳದೆ, ಆಯಾಯ ಮತಗಟ್ಟೆ ಪ್ರದೇಶದಿಂದ ಮಾಹಿತಿ ಪಡೆದುಕೊಂಡು ಭರ್ತಿ ಮಾಡಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಸೋಮಶೇಖರ್ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಮಾತನಾಡಿ, ಗಣತಿ ನಮೂನೆ ವಿತರಣಾ ಕಾರ್ಯವು ಶೇ. ೧೦೦ ರಷ್ಟು ಆಗಿದೆ. ಆ ನಿಟ್ಟಿನಲ್ಲಿ ಡಿಜಿಟಲೀಕರಣ ಪ್ರಕ್ರಿಯೆ ನಡೆಯುತ್ತಿದ್ದು, ರಾಜಕೀಯ ಪಕ್ಷಗಳ ಪ್ರಮುಖರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯದಲ್ಲಿ ಸಹಕಾರ ನೀಡುವಂತೆ ಕೋರಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯ ಸಂಬAಧಿಸಿದAತೆ ಸ್ಥಳೀಯ ಸಂಸ್ಥೆಗಳ ಮೂಲಕವೂ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮ ನಡೆಯುತ್ತಿದ್ದು, ಜಾಗೃತಿ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು. ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೀಗೆ ಎಲ್ಲಾ ಹಂತದಲ್ಲಿ ಅರಿವು ಕಾರ್ಯಕ್ರಮ ನಡೆಯುತ್ತಿದೆ ಎಂದು ಹೇಳಿದರು.
ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಾತನಾಡಿ, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧಿಸಿದAತೆ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ೨೭೫ ಮತಗಟ್ಟೆಗಳಿದ್ದು, ೨,೩೮,೪೪೭ ಮತದಾರರಿಗೆ ಗಣತಿ ನಮೂನೆಯನ್ನು ವಿತರಿಸಲಾಗಿದೆ. ಇವರಲ್ಲಿ ೧,೫೧,೭೬೮ ಮಂದಿಯ ಗಣತಿ ನಮೂನೆಯ ಡಿಜಿಟಲೀಕರಣ ಮಾಡಲಾಗಿದ್ದು, ಶೇ.೬೩ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು. ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ್ ಅವರು ಮಾಹಿತಿ ನೀಡಿ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ೨೭೭ ಮತಗಟ್ಟೆಗಳಿದ್ದು, ೨,೩೦,೨೧೦ ಮತದಾರರಿಗೆ ಗಣತಿ ನಮೂನೆ ವಿತರಿಸಲಾಗಿದೆ. ಇವರಲ್ಲಿ ೧,೫೪,೩೨೩ ಮತದಾರರ ಗಣತಿ ನಮೂನೆ ಡಿಜಿಟಲೀಕರಣ ಕಾರ್ಯ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
ಭಾರತೀಯ ಜನತಾ ಪಕ್ಷದ ಪ್ರಮುಖರಾದ ಸಜಿಲ್ ಕೃಷ್ಣ ಹಾಗೂ ಜಾತ್ಯತೀತ ಜನತಾ ದಳದ ಪ್ರಮುಖರಾದ ಗುಲಾಬಿ ಜನಾರ್ಧನ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬAಧಿಸಿದAತೆ ಎಲ್ಲೆಡೆ ತಮ್ಮ ಹಂತದಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟುಹೋಗದಂತೆ ಗಮನಹರಿಸಲಾಗಿದೆ ಎಂದು ತಿಳಿಸಿದರು. ಚುನಾವಣಾ ಶಿರಸ್ತೆದಾರ್ ಮಹೇಶ್, ಅನಿಲ್ ಕುಮಾರ್ ಇತರರು ಇದ್ದರು.