ಕೂಡಿಗೆ, ಜು. ೨೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಸಮೀಪದ ಮೂರು ಗ್ರಾಮಗಳಲ್ಲಿ ರೂ. ೧ ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಾಂಕ್ರೀಟ್ ರಸ್ತೆಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಸಾರ್ವಜನಿಕ ಸದುಪಯೋಗಕ್ಕೆ ಲೋಕಾರ್ಪಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಸೀಗೆಹೊಸೂರು ವ್ಯಾಪ್ತಿಯ ಹುಣಸೇಪಾರೆ ಪರಿಶಿಷ್ಟ ಕಾಲೋನಿಗೆ ರೂ. ೩೦ ಲಕ್ಷ, ಜೇನುಕಲ್ಲು ಬೆಟ್ಟ ಪ್ರದೇಶದ ರಸ್ತೆಗೆ ರೂ. ೪೪ ಲಕ್ಷ ಹಾಗೂ ಸೀಗೆಹೊಸೂರು ಕಾಲೋನಿ ರಸ್ತೆಗೆ ರೂ. ೨೫ ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಸಾರ್ವಜನಿಕರು ಹಾಗೂ ರೈತರಿಗೆ ಸುಗಮ ಸಂಚಾರ ಕಲ್ಪಿಸುವ ಉದ್ದೇಶದಿಂದ ಈ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಯಲಕನೂರು-ಹೊಸಹಳ್ಳಿ ರಸ್ತೆ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ಮೂಲಕ ಪೂರ್ಣಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಶಾಸಕ ಡಾ. ಮಂತರ್ ಗೌಡ ಅವರ ಅನುದಾನದಿಂದ ಹೆಚ್ಚಿನ ಪ್ರಮಾಣದಲ್ಲಿ ಕಾಮಗಾರಿಗಳು ನಡೆಯುತ್ತಿವೆ. ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ಈಗಾಗಲೇ ಸುಮಾರು ೩ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ವಿವಿಧ ಯೋಜನೆಗಳಡಿ ಉಪರಸ್ತೆಗಳು ಸೇರಿದಂತೆ ಹಲವು ಕಾಮಗಾರಿಗಳ ಕ್ರಿಯಾ ಯೋಜನೆ ಸಿದ್ಧವಾಗಿದ್ದು, ಹಂತ ಹಂತವಾಗಿ ಅನುಷ್ಠಾನಗೊಳ್ಳಲಿವೆ ಎಂದು ಹೇಳಿದರು.
೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಅನಂತ, ಶಿವಕುಮಾರ್, ಚಂದ್ರ, ಜಿಲ್ಲಾ ಯೂನಿಯನ್ ಬ್ಯಾಂಕ್ ನಿರ್ದೇಶಕ ಸುನಿಲ್ ರಾವ್, ಸಹಕಾರ ಸಂಘದ ನಿರ್ದೇಶಕ ಕೆ.ಪಿ. ರಾಜು, ಕೃಷ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪ್ರೇಮಲೀಲಾ, ಕೂಡಿಗೆ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎಸ್. ಚಂದ್ರು, ಸೀಗೆಹೊಸೂರು ದೇವಾಲಯ ಸಮಿತಿ ಅಧ್ಯಕ್ಷ ಧನಂಜಯ, ಕಾರ್ಯದರ್ಶಿ ನಾಗೇಶ್, ಹೆಬ್ಬಾಲೆ ರಂಜನ್, ಸಂಬAಧಿಸಿದ ಇಲಾಖೆಯ ಇಂಜಿನಿಯರ್‌ಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.