ಮಡಿಕೇರಿ, ಜು. ೨೨: ನಗರದ ಮಹಾಬೋಧಿ ಪತ್ತಿನ ಸಹಕಾರ ಸಂಘದ ವತಿಯಿಂದ ತಾ. ೨೬ ರಂದು ಸೋಮವಾರಪೇಟೆಯಲ್ಲಿ ಛತ್ರಪತಿ ಶಾಹುಮಹಾರಾಜರ ೧೫೨ನೇ ಜಯಂತಿ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಿಗ್ಗೆ ೧೧ ಗಂಟೆಗೆ ಸೋಮವಾರಪೇಟೆಯ ಅಂಬೇಡ್ಕರ್ ಭವನದಲ್ಲಿ ಆಯೋಜಿತ ಕಾರ್ಯಕ್ರಮವನ್ನು ಶಾಸಕ ಮಂತರ್ ಗೌಡ ಉದ್ಘಾಟಿಸಲಿದ್ದು, ಮಹಾಬೋಧಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಸ್.ಸಿ. ಸತೀಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಭಾಷಣಗಾರರಾಗಿ ನಿವೃತ್ತ ಪ್ರಾಂಶುಪಾಲ ಡಾ. ಜೆ. ಸೋಮಣ್ಣ, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ, ಶಾಂತಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಈ. ಜಯೇಂದ್ರ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದ್ದಾರೆ.