ಮಡಿಕೇರಿ, ಜು. ೨೨: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರತಿಷ್ಠಿತ ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಪುರುಷ ಲೇಖಕರು ಪ್ರಕಟಿಸಿರುವ ಕನ್ನಡ ಭಾಷೆಯ ಕೃತಿಗಳನ್ನು ಆಹ್ವಾನಿಸಲಾಗಿದೆ.

ಶಕ್ತಿ ಪತ್ರಿಕೆಯ ಸ್ಥಾಪಕ ಸಂಪಾದಕರಾಗಿದ್ದ ದಿವಂಗತ ಬಿ.ಎಸ್. ಗೋಪಾಲಕೃಷ್ಣ ಅವರ ಸ್ಮರಣಾರ್ಥ ಪುತ್ರ ಅನಂತಶಯನ ಹಾಗೂ ಸಹೋದರರು ಈ ದತ್ತಿಯನ್ನು ಸ್ಥಾಪಿಸಿದ್ದು, ಪುರುಷ ಲೇಖಕರನ್ನು ಪ್ರೋತ್ಸಾಹಿಸುವ ಉದ್ದೇಶ ಹೊಂದಿದೆ. ೨೦೨೬-೨೭ನೇ ಸಾಲಿನ ಪ್ರಶಸ್ತಿಗಾಗಿ ಆಸಕ್ತ ಲೇಖಕರು ತಮ್ಮ ಪ್ರಕಟಿತ ಪುಸ್ತಕದ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ೨೦೨೧ರ ನಂತರ ಪ್ರಕಟಗೊಂಡಿರುವ ಪುಸ್ತಕಗಳು ಮಾತ್ರ ಸ್ಪರ್ಧೆಗೆ ಅರ್ಹವಾಗಿರುತ್ತವೆ.

ಸ್ಪರ್ಧೆಗೆ ಭಾಗವಹಿಸುವ ಲೇಖಕರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರಬೇಕು. ಒಬ್ಬ ಲೇಖಕರು ಒಂದು ಕೃತಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದ್ದು, ಲಕೋಟೆಯ ಮೇಲೆ ಬಿ.ಎಸ್. ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಎಂದು ಸ್ಪಷ್ಟವಾಗಿ ನಮೂದಿಸಬೇಕು.

ಪ್ರಶಸ್ತಿಗೆ ಕೊಡಗು ಜಿಲ್ಲೆಯ ಲೇಖಕರಿಗೆ ಮಾತ್ರ ಅವಕಾಶವಿದೆ. ಪುಸ್ತಕಗಳನ್ನು ಸಲ್ಲಿಸಲು ಆಗಸ್ಟ್ ೨ ಕೊನೆಯ ದಿನಾಂಕವಾಗಿದೆ.

ಪುಸ್ತಕಗಳನ್ನು ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅಂಬೇಡ್ಕರ್ ಭವನದ ಬಳಿ, ಸುದರ್ಶನ ವೃತ್ತ, ಮಡಿಕೇರಿ. ಮೊಬೈಲ್: ೯೪೪೮೩ ೪೬೨೭೬ ಇಲ್ಲಿಗೆ ನಿಗದಿತ ದಿನಾಂಕದೊಳಗೆ ಸಲ್ಲಿಸುವಂತೆ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.