ಮಡಿಕೇರಿ, ಜು. ೨೨: ಮಡಿಕೇರಿಯ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಗೆ ಅಕ್ಕಪಡೆ ಸಿಬ್ಬಂದಿ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಸಿಬ್ಬಂದಿ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೊ ಕಾಯ್ದೆ, ಕಡ್ಡಾಯ ಶಿಕ್ಷಣ ಮತ್ತು ಶಿಕ್ಷಣದ ಮಹತ್ವ, ಬೇಟಿ ಬಚಾವೋ ಬೇಟಿ ಪಡಾವೋ ಹಾಗೂ ತುರ್ತು ಸಂದರ್ಭದಲ್ಲಿ ಕರೆ ಮಾಡಬೇಕಾದ ಸಂಖ್ಯೆಗಳ ಬಗ್ಗೆ ಅರಿವನ್ನು ಮೂಡಿಸಿದರು.