ಕಡಂಗ, ಜು. ೨೨: ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಮ್ಮತ್ತಿ ಮತ್ತು ಒಂಟಿಯAಗಡಿಯಲ್ಲಿ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಅಧಿಕಾರಿ ಎನ್.ಜೆ. ಲತಾ ಮತ್ತು ವಾಣಿಶ್ರೀ ನೇತೃತ್ವದಲ್ಲಿ ದ್ವಿಚಕ್ರ ವಾಹನದ ಸವಾರರು ಹೆಲ್ಮೆಟ್ ಧರಿಸುವ ಬಗ್ಗೆ ಮತ್ತು ಸಂಚಾರ ಸುರಕ್ಷತೆಯ ಬಗ್ಗೆ ಅರಿವು ಕಾರ್ಯಕ್ರಮ ನಡೆಸಲಾಯಿತು.
ಹೆಲ್ಮೆಟ್ ಹಾಕದೆ ಇರುವ ಸವಾರರಿಗೆ ರೂ. ೫೦೦ ದಂಡ ವಿಧಿಸಲಾಗುವುದು ಮತ್ತು ಅದರ ಉಪಯೋಗಗಳನ್ನು ವಿವರಿಸಲಾಯಿತು. ಈ ಸಂದರ್ಭ ಪೊಲೀಸ್ ಇಲಾಖೆ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.