ಕುಶಾಲನಗರ, ಜು. ೨೨: ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಆರ್. ಗುಂಡೂರಾವ್ ಅವರ ಸ್ಮರಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು.

ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ದಿ. ಆರ್. ಗುಂಡೂರಾವ್ ಅವರ ಪುತ್ಥಳಿ ನಿರ್ಮಾಣದ ಸಂಬAಧ ನಡೆದ ವಿವಿಧ ಸಂಘ-ಸAಸ್ಥೆಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

೧೯೬೦ರ ದಶಕದಲ್ಲಿ ಕುಶಾಲನಗರ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ನಂತರ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಗುಂಡೂರಾವ್ ಅವರು ಕುಶಾಲನಗರ ಮತ್ತು ಸುತ್ತಮುತ್ತ ವ್ಯಾಪ್ತಿಯ ಅಭಿವೃದ್ಧಿಯ ಹರಿಕಾರರಾಗಿದ್ದಾರೆ. ಅವರ ಸ್ಮರಣೆಗಾಗಿ ಪುರಸಭೆಯ ಆವರಣದಲ್ಲಿ ಪ್ರತಿಮೆ ನಿರ್ಮಿಸಲು ಪಕ್ಷಾತೀತವಾಗಿ ಉದ್ದೇಶಿಸಿರುವುದು ಉತ್ತಮ ವಿಚಾರ ಎಂದು ಹೇಳಿದರು.

ಈ ಸಂಬAಧ ಸಭೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬರ ಸಲಹೆ ಸೂಚನೆಗಳನ್ನು ಆಲಿಸಿದರು. ಆಗಸ್ಟ್ ತಿಂಗಳಲ್ಲಿ ಗುಂಡೂರಾವ್ ಪುಣ್ಯಸ್ಮರಣೆ ದಿನದಂದು ಪುತ್ಥಳಿ ನಿರ್ಮಾಣಕ್ಕೆ ಭೂಮಿಪೂಜೆ ಹಮ್ಮಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಇಂಜಿನಿಯರ್ ಅರ್ಬಸ್ ಅಹಮದ್ ಅವರು ಪ್ರತಿಮೆ ನಿರ್ಮಾಣದ ಬಗ್ಗೆ ಸಭೆಗೆ ತಾಂತ್ರಿಕ ಮಾಹಿತಿ ಒದಗಿಸಿದರು.

ಈ ಸಂಬAಧ ಗುಂಡೂರಾವ್ ಅವರ ಒಡನಾಡಿಗಳು ಹಾಗೂ ಸರ್ವ ಸಂಘ-ಸAಸ್ಥೆಗಳ ಪ್ರಮುಖರೊಂದಿಗೆ ಅಂತಿಮವಾಗಿ ಚರ್ಚಿಸಿ ನಿರ್ಮಾಣ ಸಮಿತಿಯೊಂದನ್ನು ರೂಪಿಸಲು ತಾ. ೨೮ ರಂದು ಸಭೆ ನಡೆಸುವಂತೆ ನಿರ್ಧರಿಸಲಾಯಿತು.

ಗುಂಡೂರಾವ್ ಅವರ ಆಪ್ತ ಸಹಾಯಕರು ಮತ್ತು ಒಡನಾಡಿಯಾಗಿದ್ದ ಎಂ.ಹೆಚ್. ಫಜಲುಲ್ಲಾ, ಹಿರಿಯರಾದ ಎಂ.ವಿ. ನಾರಾಯಣ ಮತ್ತು ಸಂಘ-ಸAಸ್ಥೆಗಳ ಪದಾಧಿಕಾರಿಗಳು ಪುತ್ಥಳಿ ನಿರ್ಮಾಣದ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಗುಂಡೂರಾವ್ ಅವರ ಕುಟುಂಬ ಸದಸ್ಯರು ಮತ್ತು ಕಾಂಗ್ರೆಸ್ ಪ್ರಮುಖರಾದ ಮಂಜುನಾಥ್ ಗುಂಡೂರಾವ್, ಪುರಸಭೆ ಆರೋಗ್ಯ ಅಧಿಕಾರಿ ಉದಯಕುಮಾರ್ ಮತ್ತು ವಿವಿಧ ಸಂಘ-ಸAಸ್ಥೆಗಳ ಪ್ರಮುಖರು, ಪಕ್ಷಗಳ ಪದಾಧಿಕಾರಿಗಳು ಇದ್ದರು.