ಚೆಯ್ಯಂಡಾಣೆ, ಜು. ೨೨: ಪ್ರವಾಸಿ ತಾಣಗಳಾದ ಚೇಲಾವರ ಜಲಪಾತ ಹಾಗೂ ಕಬ್ಬೆಬೆಟ್ಟ ಪ್ರದೇಶದಲ್ಲಿ ಸ್ವಚ್ಛತಾ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು.

ಗ್ರಾಮಸ್ಥರು, ಸ್ಥಳೀಯ ಹಾಗೂ ಸಮೀಪದ ರೆಸಾರ್ಟ್, ಹೋಂ-ಸ್ಟೇ ಸಿಬ್ಬಂದಿಗಳು, ವಿವಿಧ ಸಂಘ-ಸAಸ್ಥೆಗಳ ಸದಸ್ಯರು ಅಭಿಯಾನದಲ್ಲಿ ಭಾಗವಹಿಸಿ ಪ್ರವಾಸಿಗರು ಬಿಸಾಡಿದ್ದ ಪ್ಲಾಸ್ಟಿಕ್ ಬಾಟಲಿಗಳು, ಆಹಾರದ ಪ್ಯಾಕೆಟ್‌ಗಳು, ಮದ್ಯದ ಬಾಟಲಿಗಳು ಹಾಗೂ ಇನ್ನಿತರ ತ್ಯಾಜ್ಯವನ್ನು ಸಂಗ್ರಹಿಸಿ ಪರಿಸರವನ್ನು ಸ್ವಚ್ಛಗೊಳಿಸಿದರು.

ಸಂಗ್ರಹಿಸಿದ ೪೫ಕ್ಕೂ ಅಧಿಕ ತ್ಯಾಜ್ಯ ಚೀಲಗಳÀನ್ನು ಖಾಸಗಿ ರೆಸಾರ್ಟ್ನವರು ವಿಲೇವಾರಿ ಮಾಡಿದರು.

ಪ್ರವಾಸಿ ತಾಣಗಳ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಾರ್ವಜನಿಕರು ಪ್ಲಾಸ್ಟಿಕ್ ಸೇರಿದಂತೆ ಯಾವುದೇ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡದೆ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಅಭಿಯಾನದಲ್ಲಿ ಭಾಗವಹಿಸಿದವರು ಮನವಿ ಮಾಡಿದರು.

ಇಂತಹ ಸ್ವಚ್ಛತಾ ಕಾರ್ಯಗಳು ನಿರಂತರವಾಗಿ ನಡೆಯಬೇಕೆಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭ ಚೇಲಾವರ ಗ್ರಾಮಸ್ಥರು, ಹೋಂ ಸ್ಟೇ, ರೆಸಾರ್ಟ್ ಮಾಲೀಕರು, ಸಿಬ್ಬಂದಿಗಳು, ಸಂಘ ಸಂಸ್ಥೆಗಳ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.