ಮಡಿಕೇರಿ, ಜು. ೨೨: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಡಿಕೇರಿ ಹ್ಯೂಂಡಾಯ್ ಕಾರ್ ಶೋರೂಮ್‌ನಲ್ಲಿ ತಾ. ೨೪ ರಂದು ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೧ ಗಂಟೆವರೆಗೆ ನೇರ ಸಂದರ್ಶನ ನಡೆಯಲಿದೆ. ಈ ನೇರ ಸಂದರ್ಶನದಲ್ಲಿ ಹ್ಯೂಂಡಾಯ್ ಕಾರ್ ಶೋರೂಮ್ ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಈ ನೇರ ಸಂದರ್ಶನದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ. ಮಂಜುನಾಥ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಾಬ್ ಕೋಆರ್ಡಿನೇಟರ್ - ೮೨೯೬೦೨೦೮೨೬ ನ್ನು ಸಂಪರ್ಕಿಸಬಹುದಾಗಿದೆ.