ಗುಡ್ಡೆಹೊಸೂರು, ಜು. ೨೨: ವಿದ್ಯಾರ್ಥಿಗಳು ಯಾವುದೇ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸುವುದು ಅಗತ್ಯವಾಗಿದೆ ಎಂದು ಜನಜಾಗೃತಿ ವೇದಿಕೆಯ ಸದಸ್ಯರಾದ ಎಂ.ಎನ್ ಚಂದ್ರಮೋಹನ್ ತಿಳಿಸಿರು.
ಕುಶಾಲನಗರದ ಸಮೀಪ ಬಸವನಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆ ಆಶ್ರಯದಲ್ಲಿ ನಡೆದ ಸ್ವಾಸ್ಥö್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾಸ್ಥö್ಯ ಸಮಾಜ ನಿರ್ಮಾಣ ಮಾಡುವಲ್ಲಿ ಯುವಜನತೆಯ ಪಾತ್ರ ಮತ್ತು ಉತ್ತಮ ಪರಿಸರ ಉಳಿಸುವಲ್ಲಿ ವಿದ್ಯಾರ್ಥಿಗಳ ಕಾಳಜಿಯ ಬಗ್ಗೆ ಮಾಹಿತಿ ಒದಗಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿ ಸುವರ್ಣ ಅವರು ಮಾತನಾಡಿ, ಮಕ್ಕಳು ಶಿಕ್ಷಣದ ಜೊತೆಗೆ ಸಮಾಜದ ಆಗುಹೋಗುಗಳ ಬಗ್ಗೆ ತಿಳುವಳಿಕೆ ಹೊಂದಬೇಕು ಎಂದರು.
ಶಾಲೆಯ ಶಿಕ್ಷಕರಾದ ಮಹೇಂದ್ರ ಅವರು ಮಕ್ಕಳಿಗೆ ಸ್ವಾಸ್ಥö್ಯ ಸಂಕಲ್ಪ ಬಗ್ಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿಗಳು ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಪ್ರಾಯ ಮಂಡಿಸಿದರು.
ಯೋಜನೆಯ ಗುಡ್ಡೆಹೊಸೂರು ವಲಯ ಮೇಲ್ವಿಚಾರಕರಾದ ಪವಿತ್ರಾಕ್ಷಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭ ಶಿಕ್ಷಕರಾದ ವಿಜಯಲಕ್ಷಿö್ಮ, ಗಿರೀಶ್ ಇದ್ದರು. ಸೇವಾ ಪ್ರತಿನಿಧಿ ರೋಹಿಣಿ ಅವರು ಸ್ವಾಗತಿಸಿದರು. ಶಿಕ್ಷಕ ಮಹೇಂದ್ರ ಅವರು ವಂದಿಸಿದರು.