ನವದೆಹಲಿ, ಜು. ೨೨: ನೀಟ್ ಅಕ್ರಮಕ್ಕೆ ಸಂಬAಧಿಸಿದAತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂv

ï ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು.

ಪೊಲೀಸ್ ದೌರ್ಜನ್ಯಕ್ಕೆ ಸಂಬAಧಿಸಿದ ವೀಡಿಯೋಗಳು ನನ್ನ ಬಳಿ ಇವೆ ಎಂದು ಅರ್ಜಿದಾರರ ಪರ ವಕೀಲರು ಪೊಲೀಸರ ಕೃತ್ಯವನ್ನು ಸಾಬೀತುಪಡಿಸಲು ವೀಡಿಯೋ ಸಾಕ್ಷö್ಯಗಳನ್ನು ಸಲ್ಲಿಸಲು ಮುಂದಾದಾಗ, ನಮ್ಮ ಸಮಯ ವ್ಯರ್ಥ ಮಾಡಬೇಡಿ, ನಿಮ್ಮ ಸಮಯವನ್ನೂ ಹಾಳು ಮಾಡಿಕೊಳ್ಳಬೇಡಿ ಎಂದು ಸಿಜೆಐ ಎಚ್ಚರಿಸಿದರು.