ಚೆಯ್ಯಂಡಾಣೆ, ಜು. ೨೨: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷೆ ಭವ್ಯ ವಹಿಸಿದ್ದರು. ಶಾಲೆಯ ಹಳೆಯ ವಿದ್ಯಾರ್ಥಿ, ಪ್ರಶಸ್ತಿ ವಿಜೇತ ಪತ್ರಕರ್ತ ಅಶ್ರಫ್ ಚೆಯ್ಯಂಡಾಣೆ, ಚೆಯ್ಯಂಡಾಣೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಕಿರಿಯ ಆರೋಗ್ಯ ಅಧಿಕಾರಿ ಕನಕಾವತಿ, ೧೨ ವರ್ಷಗಳ ಕಾಲ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರತ್ನಾ ಹಾಗೂ ವರ್ಗಾವಣೆಗೊಂಡ ಅತಿಥಿ ಶಿಕ್ಷಕಿ ಸತ್ಯಮ್ಮ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಪತ್ರಕರ್ತ ಅಶ್ರಫ್, ವಿದ್ಯಾರ್ಥಿಗಳು ಶಿಸ್ತನ್ನು ಪಾಲಿಸಿ ಗುರಿಯೊಂದಿಗೆ ಮುನ್ನಡೆದರೆ ಉನ್ನತ ಸ್ಥಾನವನ್ನು ಅಲಂಕರಿಸಲು ಸಾಧ್ಯ ಎಂದರು.

ಕನಕಾವತಿ ಮಾತನಾಡಿ, ವಿದ್ಯಾರ್ಥಿಗಳು ಗೊತ್ತಿಲ್ಲದ ವಿಷಯಗಳನ್ನು ಶಿಕ್ಷಕರಿಂದ ಕೇಳಿ ತಿಳಿದುಕೊಳ್ಳಬೇಕು ಎಂದರು. ಸತ್ಯಮ್ಮ ಮತ್ತು ರತ್ನಾ ತಮ್ಮ ಅನಿಸಿಕೆಗಳನ್ನು ಹಂಚಿಕೊAಡರು. ಶಾಲೆಯ ಮುಖ್ಯ ಶಿಕ್ಷಕಿ ವಿಮಲಾ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭ ಎಸ್‌ಡಿಎಂಸಿ ಉಪಾಧ್ಯಕ್ಷೆ ಲಲಿತ, ಶಿಕ್ಷಕಿ ಜಯಪ್ರದ, ಅತಿಥಿ ಶಿಕ್ಷಕಿ ಜಿಜ್ಞ, ಎಸ್‌ಡಿಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.