ಸೋಮವಾರಪೇಟೆ, ಜು. ೨೨: ಪಟ್ಟಣದ ಕ್ಲಬ್ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಬ್ಯಾಂಕಿನ ೧೧೯ ನೇ ವರ್ಷದ ಸಂಸ್ಥಾಪನಾ ದಿನಾಚರಣೆ ನಡೆಯಿತು. ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ಉದ್ಯಮಿ ಶುಭಾ ಗಣೇಶ್ ಭಾಗವಹಿಸಿದ್ದರು. ಬ್ಯಾಂಕ್ ವ್ಯವಸ್ಥಾಪಕ ಗೌರಿಶಂಕರ್ ಸೇರಿದಂತೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.