ಮಡಿಕೇರಿ, ಜು. ೨೨: ರೋಟರಿ ವುಡ್ಸ್ ಸಂಸ್ಥೆಯ ವತಿಯಿಂದ ತಾ. ೨೬ ರಂದು ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ ಯೋಧನಮನ ಕಾರ್ಯಕ್ರಮ ಆಯೋಜಿಸಲಾಗಿದೆ.

ನಗರದ ರೋಟರಿ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ಆಯೋಜಿತ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ ವಿಸ್ತರಣಾ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ, ರೋಟರಿ ವಲಯ ೬ ರ ಸಹಾಯಕ ಗವರ್ನರ್ ಎಂ.ಡಿ. ರಂಗಸ್ವಾಮಿ, ವಲಯ ಸೇನಾನಿ ಕೆ.ವಸಂತ್ ಕುಮಾರ್ , ರೋಟರಿ ವುಡ್ಸ್ ಕಾರ್ಯದರ್ಶಿ ಸ್ಮಿತಾಚಂಗಪ್ಪ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮದಲ್ಲಿ ಸೈನಿಕ ದಂಪತಿಗೆ ಸನ್ಮಾನ ನೆರವೇರಲಿದೆ ಎಂದು ರೋಟರಿ ವುಡ್ಸ್ ಅಧ್ಯಕ್ಷೆ ಪ್ರಮೀಳಾ ಕೆ.ಶೆಟ್ಟಿ ತಿಳಿಸಿದ್ದಾರೆ.