ಕೂಡಿಗೆ, ಜು. ೨೩: ರಾಜ್ಯದಲ್ಲಿ ಪ್ರಥಮವಾಗಿ ಆರಂಭಗೊAಡ ಕೂಡಿಗೆ ಕ್ರೀಡಾ ವಸತಿ ಶಾಲೆಯಲ್ಲಿ ಈ ಹಿಂದಿನAತೆ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅವಕಾಶ ಮಾಡಿಕೊಡಲು ಪ್ರಯತ್ನಿಸುವದಾಗಿ ಶಾಸಕ ಡಾ. ಮಂತರ್ ಗೌಡ ಭರವಸೆ ನೀಡಿದ್ದಾರೆ.
ಕೂಡಿಗೆ ಕ್ರೀಡಾ ಶಾಲೆಯಲ್ಲಿ ಇದುವರೆಗೂ ಉತ್ತಮವಾಗಿ ಕ್ರೀಡಾ ತರಬೇತಿ ಮತ್ತು ವಿದ್ಯಾಭ್ಯಾಸವನ್ನು ವಿದ್ಯಾರ್ಥಿಗಳಿಗೆ ನೀಡುತ್ತಾ ಬರಲಾಗುತಿತ್ತು. ಪ್ರೌಢಶಾಲೆಯೊಂದಿಗೆ ಪಿಯುಸಿ ವಿದ್ಯಾರ್ಥಿಗಳಿಗೂ ವಸತಿ ನಿಲಯದ ವ್ಯವಸ್ಥೆ ಕಲ್ಪಿಸಲಾಗಿತ್ತು. ಅದರೆ ಈ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುನರ್‌ರಚಿತ ವ್ಯವಸ್ಥೆಯಡಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸದೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಬೆಂಗಳೂರು ಹಾಗೂ ಬಳ್ಳಾರಿ ನಿಲಯಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಶಾಸಕರು ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸುವದಾಗಿ ಭರವಸೆ ನೀಡಿದ್ದಾರೆ. ಈ ಸಾಲಿನ ಪ್ರಥಮ ಪಿಯುಸಿ ಶಿಕ್ಷಣದ ಜೊತೆಯಲ್ಲಿ ಕ್ರೀಡಾ ಶಾಲೆಯಲ್ಲಿ ಕ್ರೀಡಾ ತರಬೇತಿ ಪಡೆಯಲು, ಆಹಾರ ಮತ್ತು ವಸತಿ ಸೌಕರ್ಯದ ವ್ಯವಸ್ಥೆಗೆ ಸಂಬAಧಿಸಿದAತೆ ಯಾವುದೇ ಅದೇಶ ಸರಕಾರದಿಂದ ಬಂದಿಲ್ಲ. ಕಳೆದ ೯ ವರ್ಷಗಳಿಂದಲೂ ನಡೆದುಕೊಂಡು ಬರುತ್ತಿದ್ದ ನಿಯಮ, ಮತ್ತು ಆಯ್ಕೆಯ ಪ್ರಕ್ರಿಯೆ ನಡೆದಿರುವುದಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತಿರುವ ಬಗ್ಗೆ ಶಾಸಕ ಡಾ. ಮಂತರ್ ಗೌಡ ಅವರ ಗಮನಕ್ಕೆ ತಂದ ಸಂದರ್ಭ ಪ್ರವೇಶಾತಿ ಕಲ್ಪಿಸಲು ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. - ಕೆ.ಕೆ. ನಾಗರಾಜ ಶೆಟ್ಟಿ